ಹಾಸನ: ‘ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಮುಖ್ಯಸ್ಥರ ಸ್ಥಾನಕ್ಕೆ ಅವರು ನಾಲಾಯಕ್’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಹೇಳಿದರು.
ಜೆಡಿಎಸ್ ಮುಖಂಡರು ಮತ್ತು ಬೆಂಬಲಿಗರ ಮನೆಗಳ ಮೇಲೆ ಗುರುವಾರ ನಡೆದ ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವಐಟಿ ಇಲಾಖೆ ಮುಖ್ಯಸ್ಥರು, ಸರ್ಕಾರಿ ಕೆಲಸ ಬಿಟ್ಟು ಬಿಜೆಪಿಗೆ ಸೇರಿಬಿಡಲಿ’ ಎಂದು ವ್ಯಂಗ್ಯವಾಡಿದರು.
‘ಹೀಗೆಲ್ಲಾ ಮಾಡಿ ನಮ್ಮನ್ನು ಹೆದರಿಸಬಹುದು ಎನ್ನುವುದು ಅವರ ಭ್ರಮೆ. ಇಂಥವನ್ನೆಲ್ಲಾ ಸಾಕಷ್ಟು ನೋಡಿದ್ದೇನೆ. ಬಿಜೆಪಿಗೆ ಕೊನೆಗಾಲ ಸಮೀಪಿಸುತ್ತಿದೆ. ಐಟಿ ದಾಳಿಯಿಂದ ಲೋಕಸಭೆ ಚುನಾವಣೆಯಲ್ಲಿ ನಮಗೆ ಶೇ10ರಷ್ಟು ಮತಗಳು ಹೆಚ್ಚಾಗಲಿವೆ. ಐಟಿ ಇಲಾಖೆ ಮುಖ್ಯಸ್ಥರ ವಿರುದ್ಧ ಸಿಬಿಐ ತನಿಖೆ ಆಗಬೇಕು’ ಎಂದು ಅವರು ಗುಡುಗಿದರು.
ಇನ್ನಷ್ಟು ಸುದ್ದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.