ADVERTISEMENT

ಓಲೈಕೆ ರಾಜಕಾರಣಕ್ಕಾಗಿ ಜಯಂತಿ ಆಚರಣೆ: ಶಾಸಕ ಎ. ಮಂಜು

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 14:01 IST
Last Updated 22 ಜೂನ್ 2024, 14:01 IST
ಅರಕಲಗೂಡಿನಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ್, ತಾಪಂ ಇಒ ಪ್ರಕಾಶ್ ಭಾಗವಹಿಸಿದ್ದರು
ಅರಕಲಗೂಡಿನಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ. ಮಂಜು ಮಾತನಾಡಿದರು. ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ್, ತಾಪಂ ಇಒ ಪ್ರಕಾಶ್ ಭಾಗವಹಿಸಿದ್ದರು   

ಅರಕಲಗೂಡು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಶಾಸಕ ಎ. ಮಂಜು ತಿಳಿಸಿದರು.

ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸಮುದಾಯಗಳನ್ನು ಓಲೈಕೆ ಮಾಡುವ ಉದ್ದೇಶದಿಂದ ಜಯಂತಿಗಳ ಆಚರಣೆ ನಡೆದಿರುವುದು ನೋವಿನ ಸಂಗತಿ. ಮಹನೀಯರು ಸಮಾಜಕ್ಕೆ ನೀಡಿರುವ ಕೊಡುಗೆ, ಆವರ ಆದರ್ಶಗಳ ಕುರಿತು ಚಿಂತನೆ ನಡೆಯಬೇಕು ಹಾಗೂ ಇದನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಜಯಂತಿಯಲ್ಲಿ ಸಮಾಜದ ಎಲ್ಲಾ ವರ್ಗದವರೂ ಪಾಲ್ಗೊಂಡಾಗ ಅರ್ಥ ಪೂರ್ಣವೆನಿಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು. ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ್, ತಾಪಂ ಇಒ ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT