ಹಾಸನ: ‘ಮಹನೀಯರ ಜಯಂತಿ ಆಚರಣೆಯೊಂದಿಗೆ, ಅವರ ಸಾಧನೆಗಳು ನಮಗೆಲ್ಲಾ ದಾರಿದೀಪ ಆಗಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಎನ್. ಇನವಳ್ಳಿ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ 514ನೇ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಾರು ತಮ್ಮ ಜೀವನದಲ್ಲಿ ಸಮಾಜಕ್ಕೆ ಉನ್ನತ ಕೊಡುಗೆಗಳನ್ನು ನೀಡುತ್ತಾರೋ ಅವರ ಜಯಂತಿ ಮಾಡುತ್ತೇವೆ. ಜಯಂತಿ ಎಂದರೇ ಕಾರ್ಯಕ್ರಮ ಮಾಡಿ, ಊಟ ಹಾಕಿದರೆ ಸಾಲದು, ಸಾಧಕರ ಸಾಧನೆ ನಮಗೆಲ್ಲಾ ದಾರಿದೀಪ ಆಗಿರಬೇಕು. ಮಹನೀಯರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಕೆಂಪೇಗೌಡರ ಜಯಂತಿ ಆಚರಣೆಗೂ ಮೊದಲು ಅವರ ಸಾಧನೆಗಳೇನು? ಅವರು ನಮಗೆಲ್ಲಾ ಯಾವ ರೀತಿ ದಾರಿ ದೀಪವಾಗಿದ್ದರು ಎಂಬುದನ್ನು ತಿಳಿಯಬೇಕು. ವಿಜಯನಗರ ಸಾಮ್ರಾಜ್ಯದ ಕನಸನ್ನು ನನಸು ಮಾಡಿದ ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಗರ ನಿರ್ಮಾಣವಾಗಿದೆ ಎಂದು ಹೇಳಿದರು.
ಆದಿಚುಂಚನಗಿರಿ ಶಾಖಾ ಮಠದ ಮಠಾಧೀಶ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಎಲ್. ಮಲ್ಲೇಶ್ ಗೌಡ, ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಪೂರ್ಣಚಂದ್ರ ತೇಜಸ್ವಿ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಜಂಟಿ ಕಾರ್ಯದರ್ಶಿ ಲಲಿತಾ, ಉಪಾಧ್ಯಕ್ಷ ಮಂಜುನಾಥ್, ಬೆಟ್ಟೇಗೌಡ, ಮಾಜಿ ಉಪಾಧ್ಯಕ್ಷ ಎಚ್.ಆರ್. ರಂಗನಾಥ್, ಚನ್ನಂಗಿಹಳ್ಳಿ ಶ್ರೀಕಾಂತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.