ADVERTISEMENT

ಕಿಸಾನ್ ಸಮ್ಮಾನ್ : ಮನೆಗಳಿಗೆ ತೆರಳಿ ಇ-ಕೆವೈಸಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2023, 12:31 IST
Last Updated 14 ಜೂನ್ 2023, 12:31 IST
ಜಾವಗಲ್ ಗ್ರಾಮದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿರುವುದು.
ಜಾವಗಲ್ ಗ್ರಾಮದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿರುವುದು.   

ಜಾವಗಲ್: ಕೇಂದ್ರ ಸರ್ಕಾರದ  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ  ಸೌಲಭ್ಯ ಪಡೆಯಲು ರೈತರು ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಗ್ರಾಮದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಬ್ರಹ್ಮಣ್ಯ ತಿಳಿಸಿದರು.

ಕೃಷಿ ಇಲಾಖೆ ಅಧಿಕಾರಿಗಳು ಇ-ಕೆವೈಸಿ ನೋಂದಾಯಿಸಲು ರೈತರಿಗೆ ಅರಿವು ಮೂಡಿಸುತ್ತಿದ್ದರೂ ರೈತರು ಇ-ಕೆವೈಸಿ ನೋಂದಣಿಗೆ ಆಸಕ್ತಿ ತೋರದೆ ಇರುವ ಕಾರಣ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೇ ರೈತರ ಮನೆಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದ್ದಾರೆ ಎಂದರು.

ಇ- ಕೆವೈಸಿ ಮಾಡಿಸಲು ಜೂನ್ 30 ಅಂತಿಮ ದಿನವಾಗಿದ್ದು, ರೈತರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.