ADVERTISEMENT

ಇಂಗ್ಲೀಷ್ ವ್ಯಾಮೋಹ ಬಿಡಿ, ಕನ್ನಡ ಕಟ್ಟಿ ಬೆಳೆಸಿ: ಹೇಮಂತ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 13:22 IST
Last Updated 21 ನವೆಂಬರ್ 2024, 13:22 IST
ಅರಸೀಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವೈಭವಯುತ ಕನ್ನಡ ರಾಜೋತ್ಸವ ಕರವೇ ತಾಲ್ಲೂಕು ಅಧ್ಯಕ್ಷ ಹೇಮಂತ್‌ಕುಮಾರ್‌ ಉದ್ಘಾಟಿಸಿದರು. ಉಪನ್ಯಾಸಕಿ ಗೀತಾಲಕ್ಷ್ಮಿ, ಪ್ರಾಂಶುಪಾಲ ಎಸ್‌.ನಾರಾಯಣ್‌, ವಿಷ್ಣುವರ್ಧನ್‌ ಇದ್ದರು
ಅರಸೀಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವೈಭವಯುತ ಕನ್ನಡ ರಾಜೋತ್ಸವ ಕರವೇ ತಾಲ್ಲೂಕು ಅಧ್ಯಕ್ಷ ಹೇಮಂತ್‌ಕುಮಾರ್‌ ಉದ್ಘಾಟಿಸಿದರು. ಉಪನ್ಯಾಸಕಿ ಗೀತಾಲಕ್ಷ್ಮಿ, ಪ್ರಾಂಶುಪಾಲ ಎಸ್‌.ನಾರಾಯಣ್‌, ವಿಷ್ಣುವರ್ಧನ್‌ ಇದ್ದರು   

ಅರಸೀಕೆರೆ: ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ವಿದ್ಯಾರ್ಥಿಗಳು ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗದೆ ಮಾತೃಭಾಷೆ ಕನ್ನಡ ಕಟ್ಟುವ ಕೆಲಸ ಮಾಡಬೇಕು’ ಎಂದು ಕರವೇ ತಾಲ್ಲೂಕು ಅಧ್ಯಕ್ಷ ಹೇಮಂತ್‌ಕುಮಾರ್‌ ಹೇಳಿದರು.

ನಗರದ ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿ ಕಲ್ಪತರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಗೀತಾಲಕ್ಷ್ಮಿ.ಎಲ್ ಮಾತನಾಡಿ,‘ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಕನ್ನಡ ನಾಡಿನಲ್ಲಿ ಹುಟ್ಟಿದ ನಾವೇ ಧನ್ಯರು. ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣವಿದ್ದು ವಿದ್ಯಾರ್ಜನೆ ಕಡೆ ಗಮನಹರಿಸಬೇಕು. ಕರ್ನಾಟಕದ ಏಕೀಕರಣಕ್ಕಾಗಿ ನೂರಾರು ಜನ ಶ್ರಮಿಸಿದ್ದಾರೆ. ಅಂಥವರನ್ನ ನೆನಪು ಮಾಡಿಕೊಳ್ಳಲು ಕನ್ನಡ ರಾಜ್ಯೋತ್ಸವ ಒಂದು ಸುಸಂದರ್ಭ’ ಎಂದು ಹೇಳಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಎಸ್. ನಾರಾಯಣ್ ಮಾತನಾಡಿದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ಧರಿಸಿ ಅತಿಥಿಗಳನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಕಾರ್ಯಕ್ರಮಕ್ಕೆ ಬರಮಾಡಿಕೊಂಡರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಉಷಾ, ಸಮೂಹ ಸಂಪನ್ಮೂಲ ವ್ಯಕ್ತಿ ವಿಷ್ಣುವರ್ಧನ್, ಗುತ್ತಿಗೆದಾರ ಕೃಷ್ಣ, ಗಿರೀಶ್, ಪ್ರೊ. ಗೀತಾ, ಭಾಸ್ಕರ್, ಐಕ್ಯೂಎಸಿ ಸಂಚಾಲಕ ಡಾ. ಸುನಿಲ್ ಪ್ರೊ. ಶಿವಕುಮಾರ್, ಡಾ. ಹರೀಶ್ ಕುಮಾರ್, ರಾಘವೇಂದ್ರ ಭಜಂತ್ರಿ, ಹರೀಶ್, ರವಿ, ಮೋಹನ್ ಮಲ್ಲಿಕಾರ್ಜುನ್, ವೀಣಾ, ಪ್ರತಿಭಾ, ರತ್ನಮ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.