ಹಾಸನ: ನಿರೀಕ್ಷೆಯಂತೆ ಮಾಜಿ ಸಚಿವ ಎ.ಮಂಜು ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ರಾತ್ರಿ ಶಾಸಕ ಪ್ರೀತಂಗೌಡ ಅವರು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎದುರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
‘ಪಕ್ಷದ ಸಿದ್ದಾಂತ ಒಪ್ಪಿ ಬಿಜೆಪಿ ಸದಸ್ಯತ್ವ ಪಡೆದಿದ್ದೇನೆ. ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಬೆಂಬಲಿಗರೊಂದಿಗೆ ಬಿಜೆಪಿ ಸೇರುವ ದಿನ ಪ್ರಕಟಿಸಲಾಗುವುದು. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಫ್ಯಾಕ್ಸ್ ಮೂಲಕ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಒಂದು ಕುಟುಂಬ ಬಲಪಡಿಸಲು ಮೈತ್ರಿ ಬಳಕೆಯಾಗುತ್ತಿದೆ. ಆ ಕಾರಣದಿಂದ ಪಕ್ಷ ತೊರೆಯುತ್ತಿದ್ದೇನೆ. ಕಾಂಗ್ರೆಸ್‌ನ ಈ ಮೈತ್ರಿ ಮುಂದುವರೆದರೆ ಪಕ್ಷಕ್ಕೆ ಮಾರಕವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷರಿಗೂ ಹೇಳಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.