ಹಾಸನ: ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಕೆಲ ಕಾಲ ರಸ್ತೆ ತಡೆ ನಡೆಸಿದರು. ಕೆಎಸ್ಆರ್‌ಟಿಸಿ ಬಸ್ ಸಂಚಾರ ಎಂದಿನಂತೆ ಸಂಚರಿಸುತ್ತಿವೆ.
ಬಂದ್ ಬಂದೋಬಸ್ತ್‌ಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿದವು.
ಅರಕಲಗೂಡು ತಾಲ್ಲೂಕು ಕಚೇರಿ ಮುಂದೆ ರೈತರ ಬಡವರ ವಿರೋಧಿ ಕಾನೂನುಗಳಿಗೆ ದಿಕ್ಕಾರ ಎಂಬ ನಾಮಪಲಕ ಹಿಡಿದು ಶಾಸಕ ಎ.ಟಿ. ರಾಮಸ್ವಾಮಿ ಏಕಾಂಗಿ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.