ಹಾಸನ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಲ್ಲಿ ರಾಜ್ಯದಾದ್ಯಂತ ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುತ್ತಿದೆ. ಹಾಸನ ಜಿಲ್ಲೆಯಾದ್ಯಂತ ಎಲ್ಲ ತಾಲ್ಲೂಕುಗಳನ್ನು ಒಳಗೊಂಡ ಎಲ್ಲ ನ್ಯಾಯಾಲಯಗಳಲ್ಲೂ ಏಕಕಾಲದಲ್ಲಿ ಲೋಕ ಅದಾಲತ್ ನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿ.ಕೆ. ತಿಳಿಸಿದ್ದಾರೆ.
ರಾಜಿ ಪ್ರಕ್ರಿಯೆಯಿಂದ ಸಮಯ, ಹಣ ಉಳಿಸಬಹುದಾಗಿದ್ದು, ಉಭಯ ಪಕ್ಷಗಾರರ ನಡುವಿನ ಬಾಂಧವ್ಯವು ವೃದ್ಧಿಸಲಿದೆ. ಕಕ್ಷಿದಾರರು ಲೋಕ ಅದಾಲತ್ ನಲ್ಲಿ ಪಾಲ್ಗೊಳ್ಳುವ ಮೂಲಕ ಅನುಕೂಲ ಪಡೆಯಬಹುದು ಎಂದು ತಿಳಿಸಿದ್ದಾರೆ.
ಬೆಳೆಗಾರರಿಗೆ ಜಮೀನು ಗುತ್ತಿಗೆ
ಹಾಸನ2005 ರ ಜನವರಿ 1 ಕ್ಕೂ ಪೂರ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆದಿರುವ ಜಮೀನನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಡಿ.31 ರವರೆಗೆ ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ್ ಕಚೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ತಿಳಿಸಿದ್ದಾರೆ.
ಜಿಲ್ಲೆಯ ಅರಕಲಗೂಡು, ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳ ತಹಶೀಲ್ದಾರ್ ಕಚೇರಿ ಹಾಗೂ ನಾಡ ಕಚೇರಿಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಪ್ಲಾಂಟೇಷನ್ ಜಮೀನು ಒತ್ತುವರಿದಾರರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಕಲೇಶಪುರ ಕೆಡಿಪಿ ಸಭೆ 19 ಕ್ಕೆ
ಹಾಸನ: ಶಾಸಕ ಸಿಮೆಂಟ್ ಮಂಜು ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯನ್ನು ನ.19 ರಂದು ಬೆಳಿಗ್ಗೆ 10.30 ಕ್ಕೆ ಸಕಲೇಶಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ 20 ರಂದು
ಹಾಸನ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ನ.20 ರಂದು ಕಲಾಭವನ ಮತ್ತು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಯೋಜಿಸಲಾಗಿದೆ.
15 ರಿಂದ 29 ವರ್ಷದೊಳಗಿನವರು ವಯೋಮಿತಿಯ ದಾಖಲೆ ಅಥವಾ ಆಧಾರ್ ಕಾರ್ಡ್ ಪ್ರತಿ ಮತ್ತು ಎಸ್‍ಎಸ್‍ಎಲ್‍ಸಿ ಅಂಕ ಪಟ್ಟಿಯನ್ನು ಕಡ್ಡಾಯವಾಗಿ ತರಬೇಕು. ಯುವಜನೋತ್ಸವದಲ್ಲಿ ಭಾಗವಹಿಸುವವರು ಬೆಳಿಗ್ಗೆ 9 ಗಂಟೆಯ ಒಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ವಿವರಗಳಿಗಾಗಿ ದೂ.ಸಂ. 08172-296256, ಮೊ.ಸಂ. 9986443611 ಇಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಕೆ. ಹರೀಶ್ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಹಾಸನ: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ. ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ. 5 ರಂದು ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.