ADVERTISEMENT

ಕೊಣನೂರು: ಗುಜರಿ ಅಂಗಡಿ ತೆರವುಗೊಳಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 15:51 IST
Last Updated 9 ಜುಲೈ 2024, 15:51 IST
ಕೊಣನೂರಿನಲ್ಲಿರುವ ಗುಜರಿ ಅಂಗಡಿಗೆ ಆರೋಗ್ಯ ನಿರೀಕ್ಷಕ ಎಂ.ಆರ್. ಆನಂದಗೌಡ, ಗ್ರಾ.ಪಂ ಅಧ್ಯಕ್ಷೆ ಮಿಸ್ಬಾ ರಿಜ್ವಾನ್ ಪೋಲೀಸ್ ಇಲಾಖೆಯ ಮಂಜುನಾಥ್, ಮಹೇಶ್ ತೆರಳಿ ಪರಿಶೀಲಿಸಿದರು.
ಕೊಣನೂರಿನಲ್ಲಿರುವ ಗುಜರಿ ಅಂಗಡಿಗೆ ಆರೋಗ್ಯ ನಿರೀಕ್ಷಕ ಎಂ.ಆರ್. ಆನಂದಗೌಡ, ಗ್ರಾ.ಪಂ ಅಧ್ಯಕ್ಷೆ ಮಿಸ್ಬಾ ರಿಜ್ವಾನ್ ಪೋಲೀಸ್ ಇಲಾಖೆಯ ಮಂಜುನಾಥ್, ಮಹೇಶ್ ತೆರಳಿ ಪರಿಶೀಲಿಸಿದರು.   

ಕೊಣನೂರು: ಉಳ್ಳೇನಹಳ್ಳಿ, ಹಂಡ್ರಂಗಿಯ ಗುಜರಿ ಅಂಗಡಿಗಳಿಗೆ ಆರೋಗ್ಯ ನಿರೀಕ್ಷಕ ಎಂ.ಆರ್. ಆನಂದಗೌಡ, ಗ್ರಾ.ಪಂ ಅಧ್ಯಕ್ಷೆ ಮಿಸ್ಬಾ ರಿಜ್ವಾನ್ ಪೊಲೀಸ್ ಇಲಾಖೆ ಮಂಜುನಾಥ್, ಮಹೇಶ್ ಭೇಟಿ ನೀಡಿ ಪರಿಶೀಲಿಸಿ ಶೀಘ್ರವಾಗಿ ಗುಜರಿ ವಸ್ತುಗಳನ್ನು ಸ್ಥಳಾಂತರ ಮಾಡುವಂತೆ ಸೂಚಿಸಿದರು.

ಪಂಚಾಯಿತಿ ಅಧ್ಯಕ್ಷೆ ಮಿಸ್ಬಾ ರಿಜ್ವಾನ್ ಮಾತನಾಡಿ, ‘ಕೊಣನೂರು ಸುತ್ತಮುತ್ತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಪಂಚಾಯಿತಿಯಿಂದ ಸೊಳ್ಳೆ ಉತ್ಪತ್ತಿಯಾಗದಂತೆ ಔಷಧ ಸಿಂಪಡಿಸಲಾಗುತ್ತಿದೆ. ರೋಗಗಳ ಬಗ್ಗೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯಕ ಹಾಗೂ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೆ ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಗುಜರಿ ವಸ್ತುಗಳನ್ನು ರಾಶಿ ಹಾಕಿಕೊಳ್ಳದೆ ಶೆಡ್ ನಿರ್ಮಿಸಿ ಸಂಗ್ರಹ ಮಾಡಬೇಕು’ ಎಂದು ಸೂಚಿಸಿದರು.

ಆರೋಗ್ಯ ನಿರೀಕ್ಷಕ ಎಂ.ಆರ್. ಆನಂದಗೌಡ ಮಾತನಾಡಿ, ಉಳ್ಳೇನಹಳ್ಳಿ, ಹಂಡ್ರಂಗಿ ಗುಜರಿ ಅಂಗಡಿಗಳಿಗೆ ಭೇಟಿ ನೀಡಿ ಮಾಲೀಕರಿಗೆ ತಿಳಿವಳಿಕೆ ನೀಡಿ ಅನಗತ್ಯ ವಸ್ತುಗಳನ್ನು ತೆರವುಗೊಳಿಸಲು ಸೂಚಿಸಿದ್ದು, ತೆರವುಗೊಳಿಸದಿದ್ದಲ್ಲಿ ಪೋಲೀಸ್ ಇಲಾಖೆಗೆ ದೂರು ಸಲ್ಲಿಸಿ ಕೇಸ್ ದಾಖಲು ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.