ಚನ್ನರಾಯಪಟ್ಟಣ: ರಾಜ್ಯ ಸರ್ಕಾರ ಎನ್‍ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೆ ತರುವುದಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿರುವುದು ವಿಳಂಬ ನೀತಿಗೆ ಕಾರಣವಾಗುತ್ತದೆ ಎಂದು ಎನ್‍ಪಿಎಸ್ ನೌಕರ ಸಂಘ ಹೇಳಿದೆ.
ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿಗೆ ತರುವುದಾಗಿ ನಿರೀಕ್ಷಿಸಿದ್ದ ನೌಕರರಿಗೆ ಇದರಿಂದ ನಿರಾಶೆಯಾಗಿದೆ. ಮೂರನೇ ಭಾರಿಗೆ ಸಮಿತಿ ರಚಿಸುವ ಮೂಲಕ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ತಾಲ್ಲೂಕು ಎನ್‍ಪಿಎಸ್ ನೌಕರಸಂಘದ ಅಧ್ಯಕ್ಷ ಕೆ.ಆರ್. ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.