ಅರಸೀಕೆರೆ: ಎರಡು ದಿನಗಳಿಂದ ನಗರದಲ್ಲಿ ಸುರಿದ ಮಳೆಗೆ ಐದು ಮನೆಗಳು ಸಂಪೂರ್ಣ ಹಾನಿಯಾಗಿದ್ದು ಹತ್ತಾರು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು.
ಒಂದು ವಾರದಿಂದ ನಗರ ಸೇರಿದಂತೆ ತಾಲ್ಲೂಕಿನ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದ್ದು ರೈತರ ಮುಖದಲ್ಲಿ ಖುಷಿ ಕಂಡರೆ ಇತ್ತ ನಗರದ ತಗ್ಗು ಪ್ರದೇಶದ ಬಡಾವಣೆಗಳ ಜನರು ಆತಂಕಕ್ಕೆ ಒಳಗಾಗಿದ್ದರು.
ನಗರದ 2ನೇ ವಾರ್ಡಿನಲ್ಲಿ ಐದು ಮನೆಗಳು ಕುಸಿದ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಎಂ. ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ ಮೇಸ್ತ್ರಿ, ಆರ್.ಐ. ಶಿವಾನಂದ್ ನಾಯ್ಕ, ನಗರಸಭೆಯ ಎಇಇ ಸುನೀಲ್, ಸದಸ್ಯರಾದ ಕಲೈಅರಸೀ, ಸುಧಾಕರ್ ಸೇರಿದಂತೆ ನಗರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆ ಕಳೆದುಕೊಂಡು ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ ಅಧ್ಯಕ್ಷ ಸಮೀವುಲ್ಲಾ, ‘ಆಸ್ತಿ ಪಾಸ್ತಿ ನಷ್ಟಕ್ಕೆ ಕಂದಾಯ ಇಲಾಖೆಯ ಮೂಲಕ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ’ ಭರವಸೆ ನೀಡಿದರು.
ಕಂದಾಯ ನಿರೀಕ್ಷಕ ಶಿವಾನಂದ ನಾಯ್ಕ ಮಾತನಾಡಿ, ‘ಸೋಮವಾರ ರಾತ್ರಿ ನಗರದಲ್ಲಿ ಸುರಿದ ಮಳೆಗೆ ಕಾಂಚನ, ಕಣಕಮ್ಮ, ಗೀತಮ್ಮ, ಮಾಲಾ ಹಾಗೂ ಶಾಂತಿ ಎಂಬುವವರ ವಾಸದ ಮನೆ ಸಂಪೂರ್ಣ ಹಾನಿಯಾಗಿದ್ದು ಸರ್ಕಾರದ ನಿಯಾಮನುಸಾರ ನಿರಾಶ್ರಿತರಿಗೆ ಸೂಕ್ತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.
Graphic text / Statistics - ಅರಸೀಕೆರೆ: ಎರಡು ದಿನಗಳಿಂದ ನಗರದಲ್ಲಿ ಸುರಿದ ಮಳೆಗೆ ಐದು ಮನೆಗಳು ಸಂಪೂರ್ಣ ಹಾನಿಯಾಗಿದ್ದು ಹತ್ತಾರು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು. ಒಂದು ವಾರದಿಂದ ನಗರ ಸೇರಿದಂತೆ ತಾಲ್ಲೂಕಿನ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದ್ದು ರೈತರ ಮುಖದಲ್ಲಿ ಖುಷಿ ಕಂಡರೆ ಇತ್ತ ನಗರದ ತಗ್ಗು ಪ್ರದೇಶದ ಬಡಾವಣೆಗಳಲ್ಲಿ ವರುಣದೇವನ ಅಬ್ಬರ ಕಂಡು ನೂರಾರು ಮಂದಿ ಶಪಿಸಲು ಕಾರಣವಾಗಿದೆ. ನಗರದ 2 ನೇ ವಾರ್ಡಿನಲ್ಲಿ ಐದು ಮನೆಗಳು ಕುಸಿದಿದ್ದು ಘಟನಾ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಎಂ. ಸಮಿವುಲ್ಲಾ ಉಪಾಧ್ಯಕ್ಷ ಮನೋಹರ ಮೇಸ್ತ್ರಿ ಆರ್.ಐ. ಶಿವಾನಂದ್ ನಾಯ್ಕ ನಗರ ಸಭೆಯ ಎಇಇ ಸುನೀಲ್ ಸ್ಥಳೀಯ ಸದಸ್ಯರಾದ ಕಲೈಅರಸೀ ಸುಧಾಕರ್ ಸೇರಿದಂತೆ ನಗರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡ ನಿರಾಶ್ರಿತರ ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಸಮಿವುಲ್ಲಾ ಭೇಟಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ಧನ ಸಹಾಯ ನೀಡಿ ಮಾತನಾಡಿದ ಅವರು ಪ್ರಾಕೃತಿಕ ವಿಕೋಪದಿಂದ ಸಂಭವಿಸುವ ಸಾವು ನೋವು ಆಸ್ತಿಪಾಸ್ತಿ ನಷ್ಟಕ್ಕೆ ಕಂದಾಯ ಇಲಾಖೆಯ ಮೂಲಕ ಸರ್ಕಾರ ಸೂಕ್ತ ಪರಿಹಾರ ನೀಡಲಿದ್ದು ಅದನ್ನು ತಮಗೆ ಕೊಡಿಸುವುದಾಗಿ ನಿರಾಶ್ರಿತ ಫಲಾನುಭವಿಗಳಿಗೆ ಭರವಸೆ ನೀಡಿದರು. ಆರ್. ಐ. ಶಿವಾನಂದ ನಾಯ್ಕ ಮಾತನಾಡಿ ಕಳೆದ ರಾತ್ರಿ ನಗರದಲ್ಲಿ ಸುರಿದ ಮಳೆಗೆ ಕಾಂಚನ ಕಣಕಮ್ಮಗೀತಮ್ಮಮಾಲಾ ಹಾಗೂ ಶಾಂತಿ ಎಂಬುವವರು ವಾಸಿಸುತ್ತಿದ್ದ ಮನೆ ಸಂಪೂರ್ಣ ಹಾನಿಯಾಗಿದ್ದು ಸರ್ಕಾರದ ನಿಯಾಮನುಸಾರ ನಿರಾಶ್ರಿತರಿಗೆ ಸೂಕ್ತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಿದೆ ಎಂದು ತಿಳಿಸಿದರು. ಪೋಟೊ : ಅರಸೀಕೆರೆಯಲ್ಲಿ ಕಳೆದೆರಡು ದಿನಗಳಿಂದ ಸುರಿದ ಮಳೆಗೆ 2 ನೇ ವಾರ್ಡಿನ ಐದು ಮನೆಗಳು ಸಂಪೂರ್ಣ ಮನೆಗಳು ಹಾನಿಯಾಗಿದ್ದು ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ ಆರ್.ಐ.ಶಿವಾನಂದನಾಯ್ಕ್ ಹಾಗೂ ನಗರಸಭೆ ಸಿಬ್ಬಂದಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.