ಚನ್ನರಾಯಪಟ್ಟಣ: ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸಂಕ್ರಾಂತಿಗೆ ಲೋಕಾರ್ಪಣೆಯಾಗಲಿದೆ’ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಕೋಟೆ ಪ್ರದೇಶದ ರಾಘವೇಂದ್ರಸ್ವಾಮಿ ಮಠದಲ್ಲಿ ರಾಜಗೋಪುರ ನಿರ್ಮಾಣಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಆಶೀರ್ವಚನ ನೀಡಿದರು.
‘ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮುಂಬರುವ ಮಕರ ಸಂಕ್ರಾಂತಿಯ ಉತ್ತರಾಯಣದಲ್ಲಿ ಲೋಕಾರ್ಪಣೆಯಾಗಲಿದೆ. ರಾಮ ದೇವರ ಸೇವೆಯಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು’ ಎಂದು ಹೇಳಿದರು.
ಮಠದ ಪ್ರಧಾನ ಅರ್ಚಕ ಕೆ.ವಿ. ಅನಂತಚಾರ್ಯ ಪೂಜಾ ಕಾರ್ಯ ನೆರವೇರಿಸಿದರು. ಮಠದ ಕಾರ್ಯದರ್ಶಿ ಪುಟ್ಟಸ್ವಾಮಿಗೌಡ, ಖಜಾಂಚಿ ರಾಘವೇಂದ್ರ, ನಿರ್ದೇಶಕರಾದ ಹರ್ಷ, ಸುನೀಲ್, ದೀಪು, ಮಠದ ವ್ಯವಸ್ಥಾಪಕ ಮುರಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.