ಆಲೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ನೊಂದಣಿಯಾಗದ ರೈತರು ಕೂಡಲೆ ಒಂದು ವಾರದೊಳಗೆ ನೋಂದಣಿ ಮಾಡಿಕೊಳ್ಳಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ. ಡಿ. ಮನು ಮನವಿ ಮಾಡಿದ್ದಾರೆ.
ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ, ‘ತಾಲ್ಲೂಕಿನಲ್ಲಿ ಇದುವರೆಗೆ 13 ಕಂತುಗಳು ಬಿಡುಗಡೆಯಾಗಿವೆ. ಸಧ್ಯದಲ್ಲೆ 14ನೇ ಕಂತು ಬಿಡುಗಡೆಯಾಗಲಿದೆ. ತಾಲ್ಲೂಕಿನಲ್ಲಿ ಒಟ್ಟಾರೆ 14584 ರೈತರ ಪೈಕಿ 11253 ರೈತರು ಮಾತ್ರ ಇಕೆವೈಸಿ ನೋಂದಣಿ ಮಾಡಿಕೊಂಡಿದ್ದಾರೆ. ಉಳಿದ ರೈತರು ಕೂಡಲೆ ಸ್ಥಳೀಯ ರೈತಸಂಪರ್ಕ ಕೇಂದ್ರ, ಕೃಷಿ ಇಲಾಖೆ, ಹತ್ತಿರದ ಕಾಮನ್ ಸರ್ವೀಸ್ ಸೆಂಟರ್ ವೆಬ್‍ಸ್ಯಟ್‌ನಲ್ಲಿ ಅಪ್ ಲೋಡ್ ಮಾಡಬೇಕು. ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್‍ಗೆ ಒಟಿಪಿ ಬಂದ ನಂತರ ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಇಲ್ಲದಿದ್ದರೆ ಕಂತಿನ ಹಣ ತಮ್ಮ ಖಾತೆಗೆ ಜಮೆ ಆಗುವುದಿಲ್ಲ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.