ಸಕಲೇಶಪುರ: ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು, ಮಲೆನಾಡು ವೀರಶೈವ ಸಮಾಜ ಹಾಗೂ ಅಂಗಸಂಸ್ಥೆಗಳ, ಆಶ್ರಯದಲ್ಲಿ ಸುತ್ತೂರು ಜಗದ್ಗುರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿ ಮಹೋತ್ಸವವನ್ನು ಸೆ. 23 ರಂದು ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಆಚರಿಸಲಾಗುತ್ತದೆ ಎಂದು ಮಲೆನಾಡು ವೀರಶೈವ ಸಮಾಜದ ಅದ್ಯಕ್ಷ ಎಚ್.ಎನ್.ದೇವರಾಜ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರಕಲಗೂಡು ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮಿ, ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಮುಖರಾದ ಬಿ.ಆರ್. ಗುರುದೇವ್, ೆಚ್.ಕೆ. ಕುಮಾರಸ್ವಾಮಿ ಮತ್ತು ಎಚ್.ಎಂ. ವಿಶ್ವನಾಥ್, ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್,ಗುರುವೇಗೌಡ ಕಲ್ಯಾಣಮಂಟಪ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಡಿ.ಬಸವಣ್ಣ ಭಾಗವಹಿಸುವರು ಎಂದರು.
ಜೆಎಸ್ಎಸ್ ವಿದ್ಯಾಸಂಸ್ಥೆಯ ಅಧೀಕ್ಷಕ ಮಂಜುನಾಥ್ ಮಾತನಾಡಿ, ಅಂದು ಬೆಳಿಗ್ಗೆ 8ಕ್ಕೆ ರೋಟರಿ ಎನ್.ಕೆ. ಗಣಪಯ್ಯ ಶ್ರವಣದೋಷವುಳ್ಳ ಶಾಲೆಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ, 8.30 ಕ್ಕೆ ಕ್ರಾಫರ್ಡ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಗೆ 9ಕ್ಕೆ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀಗಳವರ ಭಾವಚಿತ್ರ ಮೆರವಣಿಗೆಗೆ ಉಪ ವಿಭಾಗಾಧಿಕಾರಿ ಕೆ.ಎಂ. ಶ್ರುತಿ ಚಾಲನೆ ನೀಡಲಿದ್ದಾರೆ ಎಂದರು. ವೀರಶೈವ ಸಮಾಜ ಮುಖಂಡರಾದ ಅರೆಕೆರೆ ನರೇಶ್, ಗಗನ್, ಜೆಎಸ್‌ಎಸ್ ಬಿಇಡಿ ಕಾಲೇಜಿನ ಪ್ರಾಂಶುಪಾಲ ಡಾ.ನಂಜುಡಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.