ADVERTISEMENT

ಶ್ರವಣಬೆಳಗೊಳದಲ್ಲಿ 'ಸರ್ವೋದಯ ಸಂಕಲ್ಪ ಶಿಬಿರ’ ಡಿ.1 ರಿಂದ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 14:29 IST
Last Updated 28 ನವೆಂಬರ್ 2023, 14:29 IST

ಹಾಸನ: ಕೆಪಿಸಿಸಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಹಯೋಗದೊಂದಿಗೆ ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲಾ ಘಟಕಗಳ ‘ಸರ್ವೋದಯ ಸಂಕಲ್ಪ ಶಿಬಿರ’ವನ್ನು ಡಿಸೆಂಬರ್ 1 ಮತ್ತು 2 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರವು ಶ್ರವಣಬೆಳಗೊಳದ ಲಲಿತಾ ದೇವನಾಥ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಮೂರು ಜಿಲ್ಲೆಗಳಿಂದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಸುಮಾರು 120 ಮಂದಿ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

ಶಿಬಿರದಲ್ಲಿ ಪಕ್ಷದ ತತ್ವ, ಸಿದ್ಧಾಂತ, ಪಂಚಾಯತ್ ರಾಜ್ ಬಗ್ಗೆ ಮಾಹಿತಿ ಒದಗಿಸಲಾಗುವುದು. ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಯಿಂದ ವಿಶೇಷ ವಿಷಯದ ಕುರಿತು ತಜ್ಞರಿಂದ ನಾಲ್ಕು ತರಬೇತಿ ನಡೆಯಲಿವೆ ಎಂದರು.

ADVERTISEMENT

ಬೆಳಿಗ್ಗೆ 10 ಗಂಟೆಗೆ ಎಐಸಿಸಿ ಕಾರ್ಯದರ್ಶಿ ಸಂದೀಪ್ ಉದ್ಘಾಟಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ವಕ್ತಾರ ನಿಖಿತ್ ರಾಜ್, ರಾಷ್ಟ್ರ ನಿರ್ಮಾಣ ಕುರಿತು ಹಾಗೂ ಮಧ್ಯಾಹ್ನ 2 ಗಂಟೆಗೆ ಸುಧೀರ್ ಕುಮಾರ್ ಮೋದಿ ದುರಾಡಳಿತದ ಆಪತ್ತು ಮತ್ತು ವರ್ಗಗಳು ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.

ಡಿಸೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ಡಾ. ಕಿರಣ್ ಎಂ. ಗಾಜನೂರು ಅವರಿಂದ ಭಾರತದ ಸಂವಿಧಾನ ಮತ್ತು ಕಾಂಗ್ರೆಸ್ ಸಂವಿಧಾನ ಕುರಿತು ಉಪನ್ಯಾಸ ನಡೆಯಲಿದೆ ಎಂದು ವಿವರಿಸಿದರು.

ಚಂದ್ರು , ಮೋಹನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.