ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರ ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.
ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್, ಸೂರಜ್ ಅವರನ್ನು ಬಂಧಿಸಿದ್ದು, ಮಧ್ಯಾಹ್ನ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.
ಶನಿವಾರ ರಾತ್ರಿ 7.30 ರ ಸಮಯದಲ್ಲಿ ಸಿಇಎನ್ ಪೊಲೀಸ್ ಠಾಣೆಗೆ ಡಾ.ಸೂರಜ್‌ರೇವಣ್ಣ ಅವರನ್ನು ಕರೆ ತಂದಿದ್ದ ಪೊಲೀಸರು ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.
ರಾತ್ರಿ ಪೊಲೀಸ್ ಠಾಣೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿ ತೆರಳಿದ್ದರು. ಮತ್ತೊಂದೆಡೆ ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.