ಹೊಳೆನರಸೀಪುರ (ಹಾಸನ): ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ನೀಡಲು ಸಂತ್ರಸ್ತ ವ್ಯಕ್ತಿ ಹೊಳೆನರಸೀಪುರದ ಗ್ರಾಮಾಂತರ ಪೊಲೀಸ್ ಠಾಣೆಗೆ ದೌಡಾಯಿಸಿದ್ದಾರೆ.
ಎಎಸ್ಪಿ ವೆಂಕಟೇಶ್ ನಾಯ್ದು ನೇತೃತ್ವದಲ್ಲಿ ಸಂತ್ರಸ್ತ ವ್ಯಕ್ತಿಯ ಹೇಳಿಕೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಹಾಸನದ ಪೊಲೀಸ್ ವರಿಷ್ಠಾಧಿಕಾರಿಗೆ ಸಂತ್ರಸ್ತ ದೂರು ಸಲ್ಲಿಸಿದ್ದು, ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಹೇಳಿಕೆ ಪಡೆಯಬೇಕಿದ್ದು, ಅದಕ್ಕಾಗಿ ಸಂತ್ರಸ್ತ ಗ್ರಾಮಾಂತರ ಠಾಣೆಗೆ ಬಂದಿದ್ದಾರೆ. ಹೇಳಿಕೆ ಪಡೆದ ನಂತರ ಪ್ರಕರಣ ದಾಖಲಾಗಲಿದೆ.
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.