ಸಕಲೇಶಪುರ: ಮಳೆ ಸಾಧಾರಣವಾಗಿ ಸುರಿದರೂ ಭಾರೀ ಗಾಳಿಯಿಂದಾಗಿ ತಾಲ್ಲೂಕಿನ ಶಿರಾಡಿ ಘಾಟ್‌ನ್ ಗುಂಡ್ಯಾ ಹಾಗೂ ಮಾರನಹಳ್ಳಿ ನಡುವಿನ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಈ ಮಾರ್ಗದ ವಾಹನಗಳ ಸಂಚಾರ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಂದ್ ಆಗಿತ್ತು.
ಗ್ರಾಮಾಂತರ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಾರನಹಳ್ಳಿ ಗ್ರಾಮದ ಕೆಲ ಗ್ರಾಮಸ್ಥರ ನೆರವಿನಿಂದ ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.