ADVERTISEMENT

ಹಾಸನ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 9:34 IST
Last Updated 30 ಜೂನ್ 2020, 9:34 IST

ಹಾಸನ: ನಗರದ ಹೊರವಲಯದ ಆಡುವಳ್ಳಿಯಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೌಲ್ಯಾ (15) ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

‘ಹೊಟ್ಟೆ ನೋವಿನಿಂದಾಗಿ ಇಂಗ್ಲಿಷ್‌, ಗಣಿತ ಪರೀಕ್ಷೆ ಸರಿಯಾಗಿ ಬರೆದಿಲ್ಲ. ಇದರಿಂದ ಫೇಲಾದರೆ ಅವಮಾನ ಆಗುತ್ತದೆ.
ಅಪ್ಪ, ಅಮ್ಮ ಕ್ಷಮಿಸಿ’ ಎಂದು ಪತ್ರ ಬರೆದಿಟ್ಟು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಹಾಕಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT