ADVERTISEMENT

ಸರ್ಕಾರಿ ನೌಕರರ ಸಂಘದ ಯೋಜನಾ ನಿರ್ದೇಶಕರ ಚುನಾವಣೆ:49 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 15:36 IST
Last Updated 18 ಅಕ್ಟೋಬರ್ 2024, 15:36 IST
ಹೊಳೆನರಸೀಪುರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಚುನಾವಣೆಗೆ ತಾ. ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಜವರೇಗೌಡ ಎಂ. ಚುನಾವಣಾಧಿಕಾರಿ ಸಪ್ನ ಕೆ.ಎಚ್. ಅವರಿಗೆ ನಾಮಪತ್ರ ಸಲ್ಲಿಸಿದರು.
ಹೊಳೆನರಸೀಪುರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಚುನಾವಣೆಗೆ ತಾ. ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಜವರೇಗೌಡ ಎಂ. ಚುನಾವಣಾಧಿಕಾರಿ ಸಪ್ನ ಕೆ.ಎಚ್. ಅವರಿಗೆ ನಾಮಪತ್ರ ಸಲ್ಲಿಸಿದರು.   

ಪ್ರಜಾವಾಣಿ ವಾರ್ತೆ

ಹೊಳೆನರಸೀಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಘಟಕದ ಯೋಜನಾ ನಿರ್ದೇಶಕರ 33 ಸ್ಥಾನಗಳಿಗೆ ಅ.28ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ನಾಮಪಲತ್ರ ಸಲ್ಲಿಕೆಗೆ ಕಡೆಯ ದಿನವಾದ ಶುಕ್ರವಾರ   49 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು.

 ಐದು ವರ್ಷಗಳ ಅವಧಿಯ ಸ್ಥಾನಗಳಿಗೆ  ಆಯ್ಕೆ ನಡೆಸಲು 26 ಇಲಾಖೆಗಳ 1,759 ಮತದಾರರು ಇದ್ದು, ಕೃಷಿ ಇಲಾಖೆಯಿಂದ ಒಬ್ಬರು, ಕಂದಾಯ ಇಲಾಖೆ 2, ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ 1, ಪಂಚಾಯತ್ ರಾಜ್ ಎಂಜಿನಿಯರಿಂಗ್, ಪಿಎಂಜಿಎಸ್‍ವೈ ಯೋಜನೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆ 1, ಸರ್ಕಾರಿ ಪ್ರಾಥಮಿಕ ಶಾಲೆಗಳು 3, ಸರ್ಕಾರಿ ಪ್ರೌಢಶಾಲೆಗಳು 1, ಸರ್ಕಾರಿ ಪದವಿ ಪೂರ್ವ ಕಾಲೇಜುಗಳು 2, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 4, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ 2, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಹಾಗೂ ಸಾಂಖ್ಯಿಕ ಇಲಾಖೆ 2, ಸಮಾಜ ಕಲ್ಯಾಣ, ಹಿಂದುಳಿದ, ಅರಣ್ಯ, ತೋಟಗಾರಿಕೆ, ಖಜಾನೆ, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳು, ನೋಂದಣಿ, ಮುದ್ರಾಂಕ, ನ್ಯಾಯಾಂಗ, ಸೇರಿದಂತೆ ಒಟ್ಟು 33 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ADVERTISEMENT

ಅ.19 ರಂದು ನಾಮಪತ್ರ ಪರಿಶೀಲನೆ ಹಾಗೂ ನಂತರ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಣೆ ಹಾಗೂ ಅ.21 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಹಾಗೂ ಅ. 28ರಂದು 4 ಗಂಟೆ ವೆರೆಗ ಮತದಾನದ   ನಂತರ ಮತ ಏಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.