ADVERTISEMENT

ಅರಸೀಕೆರೆ: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 26ಕ್ಕೆ ಮುಷ್ಕರ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 14:20 IST
Last Updated 24 ಸೆಪ್ಟೆಂಬರ್ 2024, 14:20 IST
ಅರಸೀಕೆರೆ ಗ್ರಾಮ ಆಡಳಿತಾಧಿಕಾರಿಗಳ ಮೂಲ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ತಹಶೀಲ್ದಾರ್‌ ಸಂತೋಷಕುಮಾರ್‌ರವರಿಗೆ ಮನವಿ ಸಲ್ಲಿಸಿದರು.
ಅರಸೀಕೆರೆ ಗ್ರಾಮ ಆಡಳಿತಾಧಿಕಾರಿಗಳ ಮೂಲ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ತಹಶೀಲ್ದಾರ್‌ ಸಂತೋಷಕುಮಾರ್‌ರವರಿಗೆ ಮನವಿ ಸಲ್ಲಿಸಿದರು.   

ಅರಸೀಕೆರೆ: ‘ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಮೂಲ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೆ.26ರಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರಕ್ಕೆ ಕರೆ ನೀಡಲಾಗಿದೆ’ ಎಂದು ಗ್ರಾಮ ಆಡಳಿತಾಧಿಕಾರಿಗಳ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ ನಾಯ್ಕ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ತಹಶೀಲ್ದಾರ್ ಎಂ.ಜಿ ಸಂತೋಷ್ ಕುಮಾರ್ ರವರಿಗೆ ತಾಲ್ಲೂಕು ಗ್ರಾಮ ಆಡಳಿತಾಧಿಕಾರಿ ಸಂಘದಿಂದ ಮನವಿ ಸಲ್ಲಿಸಿ ಮಾತನಾಡಿದರು.

ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಚಿತ್ರದುರ್ಗದಲ್ಲಿ ರಾಜ್ಯಾಧ್ಯಕ್ಷ ಯೋಗೀಶ್ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಣಿ ಸಭೆ ನಿರ್ಣಯದಂತೆ ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಮನವಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಹೇಳಿದರು.

ADVERTISEMENT

ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಕುಮಾರ್ ಮಾತನಾಡಿ,‘ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕ ಮೊಬೈಲ್ ಫೋನ್  ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದೆ’ ಎಂದು ಆರೋಪಿಸಿದರು.

ತಾ.ಘಟಕ ಗೌರವಾಧ್ಯಕ್ಷ ಯದುಕುಮಾರ್, ಉಪಾಧ್ಯಕ್ಷೆ ಮಮತ, ಖಜಾಂಚಿ ಹೆಚ್.ಕೆ ನಂದಿನಿ , ಪ್ರಾಧಾನ ಕಾರ್ಯದರ್ಶಿ ಸುಮಂತ್, ಪದಾಧಿಕಾರಿಗಳಾದ ಶೃತಿ, ಶಶಿಬಾಯಿ, ಸಿದ್ದಪ್ಪ, ಪ್ರಿಯಾಂಕ, ನಿಂಗಪ್ಪ, ರಾಘವೇಂದ್ರ, ಶಿವಕುಮಾರ್ ವಮ್ಮಾರಿ, ಜಯಲಕ್ಷ್ಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪೋಟೊ : ಅರಸೀಕೆರೆ ಗ್ರಾಮ ಆಡಳಿತಾಧಿಕಾರಿಗಳ ಮೂಲ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ತಹಶೀಲ್ದಾರ್‌ ಸಂತೋಷಕುಮಾರ್‌ರವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.