ಹಾಸನ: ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಣ್ಣು ತೆರವು ಕಾರ್ಯ ಮುಗಿದಿದ್ದು, ವಾಹನಗಳ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ.
ಕೆಸರಿನಲ್ಲಿ ಸಿಲುಕಿದ ಟ್ರಕ್, ಗ್ಯಾಸ್ ಟ್ಯಾಂಕರ್, ಕಾರುಗಳನ್ನು ತೆರವುಗೊಳಿಸಲಾಗಿದೆ. ರಸ್ತೆಯುದ್ದಕ್ಕೂ ಸಂಗ್ರಹವಾಗಿರುವ ಭಾರಿ ಪ್ರಮಾಣದ ಕೆಸರಿನ ನಡುವೆಯೇ ವಾಹನಗಳು ಸಂಚರಿಸುತ್ತಿವೆ. ಮಂಗಳವಾರ ಮಧ್ಯಾಹ್ನದಿಂದ ದಾರಿ ಮಧ್ಯೆ ಸಿಲುಕಿದ್ದ ನೂರಾರು ವಾಹನಗಳನ್ನು ರಸ್ತೆಗೆ ಬಿಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.