ADVERTISEMENT

ಬ್ಯಾಡಗಿ: ಮೆಣಸಿನಕಾಯಿ ಆವಕದಲ್ಲಿ ತುಸು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 15:56 IST
Last Updated 27 ಜೂನ್ 2024, 15:56 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬ್ಯಾಡಗಿ: ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆಗೆ ಗುರುವಾರ 11,048 (2,762 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳವಾಗಿದೆ.

ಕಳೆದ ಸೋಮವಾರ 10,603 ಚೀಲ (2,650 ಕ್ವಿಂಟಲ್‌) ಮೆಣಸಿನಕಾಯಿ ಆವಕವಾಗಿತ್ತು. ಗುರುವಅರ ಪ್ರಾಂಗಣದಲ್ಲಿ 1,531 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದೆ. ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 332 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. ಒಂದು ಚೀಲ ಡಬ್ಬಿ ಮೆಣಸಿನಕಾಯಿ ₹30,199, 37 ಚೀಲ ಕಡ್ಡಿ ಮೆಣಸಿನಕಾಯಿ ₹25,209 ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹17,429 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹28,009, ಬ್ಯಾಡಗಿ ಕಡ್ಡಿ ₹24,200 ಹಾಗೂ ಗುಂಟೂರ ತಳಿ ₹11,129 ರಂತೆ ಮಾರಾಟವಾಗಿದೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ 124 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.