ADVERTISEMENT

ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ಇಳಿಕೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 15:25 IST
Last Updated 24 ಜೂನ್ 2024, 15:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬ್ಯಾಡಗಿ: ಇಲ್ಲಿನ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 10,603 ಚೀಲ (2,650 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಇಳಿಕೆಯಾಗಿದೆ.

ಕಳೆದ ಗುರುವಾರ ಮಾರುಕಟ್ಟೆಗೆ 12,798 ಚೀಲ (3,199ಕ್ವಿಂಟಲ್‌) ಮೆಣಸಿನಕಾಯಿ ಆವಕವಾಗಿತ್ತು. ಸೋಮವಾರ ಪ್ರಾಂಗಣದಲ್ಲಿ 2,036 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದೆ. ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 367 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. ಏಳು ಚೀಲ ಡಬ್ಬಿ ಮೆಣಸಿನಕಾಯಿ ₹30,231, ಎರಡು ಚೀಲ ಕಡ್ಡಿ ಮೆಣಸಿನಕಾಯಿ ₹26,499 ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹17,429 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ. ಡಬ್ಬಿ ಮೆಣಸಿನಕಾಯಿ ಕಳೆದ ಗುರುವಾರಕ್ಕಿಂತ ಗರಿಷ್ಠ ಬೆಲೆಯಲ್ಲಿ ಕ್ವಿಂಟಲ್‌ಗೆ ₹3 ಸಾವಿರ ಇಳಿಕೆಯಾಗಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹28,009, ಬ್ಯಾಡಗಿ ಕಡ್ಡಿ ₹24,209 ಹಾಗೂ ಗುಂಟೂರ ತಳಿ ₹11,209 ರಂತೆ ಮಾರಾಟವಾಗಿದೆ.

ADVERTISEMENT

ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ 162 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.