ಹಾವೇರಿ:ಇಲ್ಲಿಯ ಶಿವಲಿಂಗ ನಗರದ ಬನಶಂಕರಿದೇವಿಯ 17ನೇ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಶುಕ್ರವಾರ ಆಚರಿಸಲಾಯಿತು.
ಕೋವಿಡ್ ನಿಯಮದ ಮಾರ್ಗ ಸೂಚಿಯಂತೆ ಸರಳವಾಗಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಿಯ ದರ್ಶನ, ಪಾಲಿಕೆ ಸೇವೆ ಹಾಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ದೇವಿಗೆ ಮಾಡಿದ್ದ ವಿಶೇಷ ಅಲಂಕಾರ ಭಕ್ತರ ಗಮನ ಸೆಳೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.