ADVERTISEMENT

ಶಿಗ್ಗಾವಿ ವಿಧಾನಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 7:26 IST
Last Updated 24 ಅಕ್ಟೋಬರ್ 2024, 7:26 IST
   

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ಪತ್ನಿ ಇಬ್ಬನಿ ಹಾಗೂ ಬಿಜೆಪಿ ಮುಖಂಡರ ಜೊತೆ ಚುನಾವಣಾಧಿಕಾರಿ ಕಚೇರಿಗೆ ಬಂದಿದ್ದ ಭರತ್, ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಅವರು ಸಾಂಕೇತಿಕವಾಗಿ ಮೊದಲನೇ ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸೇರಿಕೊಂಡು ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.