ADVERTISEMENT

ಜಾತಿ ಬಣ್ಣ ಹಚ್ಚಿ ಚುನಾವಣೆ ಗೆಲ್ಲುವ ಬೊಮ್ಮಾಯಿ: ಅಬ್ದುಲ್‌ ಕರೀಂ ಆರೋಪ

ಅಂಜುಮನ್‌ ಇಸ್ಲಾಂ ಕಮಿಟಿ ಸದಸ್ಯ ಅಬ್ದುಲ್‌ ಕರೀಂ ಮೊಗಲಲ್ಲಿ ಆರೋಪ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 5:16 IST
Last Updated 25 ಮಾರ್ಚ್ 2023, 5:16 IST
ಅಬ್ದುಲ್‌ ಕರೀಂ ಮೊಗಲಲ್ಲಿ 
ಅಬ್ದುಲ್‌ ಕರೀಂ ಮೊಗಲಲ್ಲಿ    

ಹಾವೇರಿ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆಯಲ್ಲಿ

ಜಾತಿ ಬಣ್ಣ ಹಚ್ಚಿ ಗೆಲ್ಲುತ್ತಾ ಬಂದಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಒಂದು ಪೈಸೆ ಸಹಾಯ ಮಾಡಿಲ್ಲ. ಮಸೀದಿಗಳಿಗೆ ಯಾವುದೇ ಅನುದಾನ ನೀಡಿಲ್ಲ. ಹೀಗಾಗಿ ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ಎದುರು ಕಾಂಗ್ರೆಸ್‌ನಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲುವುದು ನಿಶ್ಚಿತ’ ಎಂದು ಶಿಗ್ಗಾವಿ ಅಂಜುಮನ್‌ ಇಸ್ಲಾಂ ಕಮಿಟಿ ಸದಸ್ಯ ಅಬ್ದುಲ್‌ ಕರೀಂ ಮೊಗಲಲ್ಲಿ
ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಮುಸ್ಲಿಮರಿಗೆ ಭಯೋತ್ಪಾದಕರ ಜತೆ ನಂಟಿದೆ. ಹೀಗಾಗಿ ಮುಸ್ಲಿಂ ಅಭ್ಯರ್ಥಿಗೆ ಮತ ಹಾಕಬೇಡಿ. ಹಿಂದೂಗಳು ನಾವೆಲ್ಲರೂ ಒಗ್ಗೂಡೋಣ’ ಎಂದು ಬೊಮ್ಮಾಯಿ ಅವರು ಜಾತಿ ಬಣ್ಣ ಹಚ್ಚಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಸಮಾಜವಾದಿ ಹಿನ್ನೆಲೆಯಿಂದ ಬಂದ ಬಸವರಾಜ ಬೊಮ್ಮಾಯಿ ಅವರ ಮೇಲೆ ಬಹಳ ನಿರೀಕ್ಷೆಗಳಿದ್ದವು. ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಕೆಲಸ ಮಾಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಬಿಜೆಪಿ ಐಡಿಯಾಲಜಿ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಸಿಎಂ ಬಳಿ ಮುಸ್ಲಿಂ ಮುಖಂಡರು ಮನವಿ ಪತ್ರ ತೆಗೆದುಕೊಂಡು ಹೋದರೆ, ‘ನೀವು ನನಗೆ ಓಟು ಹಾಕಲ್ಲ, ನಿಮ್ಮ ಕೆಲಸ ಹೇಗೆ ಮಾಡಿಕೊಡುವುದು’ ಅನ್ನುವ ರೀತಿ ಮಾತನಾಡುತ್ತಾರೆ. ನಮ್ಮ ಸಮುದಾಯಕ್ಕೆ ವಿರುದ್ಧವಾಗಿದ್ದಾರೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.