ಬ್ಯಾಡಗಿ: ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆಗೆ ಶುಕ್ರವಾರ 12,806 ಚೀಲ (3,201 ಕ್ವಿಂಟಲ್) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಇಳಿಕೆಯಾಗಿದೆ.
ಕಳೆದ ಮಂಗಳವಾರ 14,010 ಚೀಲ (3,502 ಕ್ವಿಂಟಲ್) ಮೆಣಸಿನಕಾಯಿ ಆವಕವಾಗಿತ್ತು. ಪ್ರಸಕ್ತ ಸಾಲಿನ ಹಂಗಾಮು ಕೊನೆಗೊಂಡಿದ್ದು, ಕೋಲ್ಡ್ ಸ್ಟೋರೇಜ್‌ಗಳಲ್ಲಿ ಸಂಗ್ರಹವಿರುವ ಮೆಣಸಿನಕಾಯಿ ಮಾರಾಟ ಮಾತ್ರ ನಡೆಯುತ್ತಿದೆ. ಶುಕ್ರವಾರ 418 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 39 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ.
30 ಚೀಲ ಡಬ್ಬಿ ಮೆಣಸಿನಕಾಯಿ ₹27,000, 32 ಚೀಲ ಕಡ್ಡಿ ಮೆಣಸಿನಕಾಯಿ ₹24,500 ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹16,500 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹24,000, ಬ್ಯಾಡಗಿ ಕಡ್ಡಿ ₹22,609 ಹಾಗೂ ಗುಂಟೂರ ತಳಿ ₹11,500 ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ 87 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.