ADVERTISEMENT

ಚುನಾವಣೆ ಬಳಿಕ ಕಾಂಗ್ರೆಸ್ ವಿಭಜನೆಯಾಗಲಿದೆ: ಬೊಮ್ಮಾಯಿ ಭವಿಷ್ಯ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 16:36 IST
Last Updated 30 ಏಪ್ರಿಲ್ 2019, 16:36 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಹಾವೇರಿ:ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯ ಮಾತ್ರವಲ್ಲ ದೇಶದಲ್ಲೇ ಕಾಂಗ್ರೆಸ್ ವಿಭಜನೆಗೊಳ್ಳಲಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.

ಹಾವೇರಿಯಲ್ಲಿ ಸೋಮವಾರ ಬಿಜೆಪಿಯ ಹಾವೇರಿ, ಧಾರವಾಡ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳ ಮೋದಿ ವಿಜಯ ಸಂಕಲ್ಪ ಯಾತ್ರೆ ಹಾಗೂ ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಳುಗುವ ಹಡಗು. ಅಲ್ಲಿ ರಾಹುಲ್ ಗಾಂಧಿ ಮಾತನ್ನೇ ಯಾರೂ ಕೇಳುತ್ತಿಲ್ಲ. ಕಾಶ್ಮೀರದ ಭಯೋತ್ಪಾದನೆ ನಮ್ಮ ಮನೆ ಬಾಗಿಲಿಗೆ ಬರುವುದನ್ನು ತಪ್ಪಿಸಬೇಕಾದರೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದರು.

ADVERTISEMENT

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ 24 ಗಂಟೆಗಳಲ್ಲಿ ರಾಜ್ಯದಲ್ಲೂ ಸರ್ಕಾರ ಬದಲಾಗಿದೆ ಎಂದು ಭವಿಷ್ಯ ನುಡಿದರು.

ಹಾವೇರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬರುತ್ತಿರುವುದು ಸ್ವಾಗತಾರ್ಹ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನನ್ನ ಕ್ಷೇತ್ರಕ್ಕೆ ರಾಹುಲ್ ಬಂದಿದ್ದರು. ನಾನು ಗೆದ್ದಿರುವುದು ಮಾತ್ರವಲ್ಲ, ಜಿಲ್ಲೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ ಬಂತು. ಹೀಗಾಗಿ, ಹಾವೇರಿಗೆ ರಾಹುಲ್ ಗಾಂಧಿ ಬಂದರೆ ಬಿಜೆಪಿಯ ಶಿವಕುಮಾರ ಉದಾಸಿ ಗೆಲುವು ನಿಶ್ಚಿತ ಎಂದು ಟಾಂಗ್ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.