ಹಿರೇಕೆರೂರು: ‘ನೈಜ ಕಾರ್ಮಿಕರ ಕಾರ್ಡ್‌ಗಳನ್ನು ಅನರ್ಹರು ಪಡೆದಿದ್ದಾರೆ ಎಂದು ಅರ್ಹ ಕಾರ್ಮಿಕರ ಕಾರ್ಡ್‌ಗಳನ್ನು ಕಾರ್ಮಿಕ ಇಲಾಖೆಯ ಅಧಿಕಾರಿಗಳು ರದ್ದು ಮಾಡಿದ್ದಾರೆ ಎಂದು ಆರೋಪಿಸಿ ಹಿರೇಕೆರೂರು ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘಗಳ ಜಂಟಿ ಸಮಿತಿಯಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಶಾಸಕ ಯು.ಬಿ.ಬಣಕಾರ ಅವರಿಗೆ ಮನವಿ ಸಲ್ಲಿಸಿದರು.
ಕಟ್ಟಡ ಕಾರ್ಮಿಕರ ಸಂಘಗಳ ಜಂಟಿ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ತಳವಾರ ಮಾತನಾಡಿ, ಕಾರ್ಮಿಕ ಅಧಿಕಾರಿಗಳು ಕಾರ್ಮಿಕರು ಕೆಲಸ ಮಾಡುವ ಕಟ್ಟಡಗಳ ಸ್ಥಳ ಪರಿಶೀಲನೆ ನಡೆಸಿಲ್ಲ. ವಿವಿಧ ಕೆಲಸ ಮಾಡುವ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರೆಂದು ಇಲಾಖೆ ವೆಬ್‌ಸೈಟ್‌ನಲ್ಲಿ ಹಾಕಿದ್ದಾರೆ. ನೈಜ್ಯ ಕಾರ್ಮಿಕರೆಂದು ಬಿಟ್ಟಿರುವ 5,974 ಕಾರ್ಡ್‌ಗಳನ್ನು ಪುನಃ ಮರು ಪರಿಶೀಲಿಸಬೇಕು. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಅರ್ಹ ಕಾರ್ಮಿಕರ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡಿದೆ, ರದ್ದಾಗಿರುವ ಅರ್ಹ ಕಾರ್ಮಿಕರ ಕಾರ್ಡ್‌ಗಳನ್ನು ಕೂಡಲೆ ಮರು ಮಂಜೂರು ಮಾಡಬೇಕು. ನೈಜ ಕಾರ್ಮಿಕರಿಗೆ ಆಕ್ಷೇಪಣ ಪತ್ರ ನೀಡಿರುವ ಕಾಲಾವಧಿಯನ್ನು ಒಂದು ತಿಂಗಳವರೆಗೆ ವಿಸ್ತರಿಸಬೇಕು. ಇಲ್ಲದಿದ್ದರೆ ಜಿಲ್ಲೆಯ ಎಂಟು ತಾಲ್ಲೂಕಿನ ಕಾರ್ಮಿಕ ಸಂಘಟನೆಯ ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.