ADVERTISEMENT

ಪಿಂಜಾರ ಅಭಿವೃದ್ಧಿ ನಿಗಮ ಮಂಡಳಿ ರಚನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 15:27 IST
Last Updated 20 ಜನವರಿ 2021, 15:27 IST
ನದಾಫ/ ಪಿಂಜಾರ ಅಭಿವೃದ್ಧಿ ನಿಗಮ ಮಂಡಳಿ ರಚನೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನದಾಫ, ಪಿಂಜಾರ ಸಂಘದ ಜಿಲ್ಲಾ ಘಟಕದ ವತಿಯಿಂದ ಬುಧವಾರ ಹಾವೇರಿಯ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು
ನದಾಫ/ ಪಿಂಜಾರ ಅಭಿವೃದ್ಧಿ ನಿಗಮ ಮಂಡಳಿ ರಚನೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನದಾಫ, ಪಿಂಜಾರ ಸಂಘದ ಜಿಲ್ಲಾ ಘಟಕದ ವತಿಯಿಂದ ಬುಧವಾರ ಹಾವೇರಿಯ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು   

ಹಾವೇರಿ: ನದಾಫ/ ಪಿಂಜಾರ ಅಭಿವೃದ್ಧಿ ನಿಗಮ ಮಂಡಳಿ ರಚನೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನದಾಫ, ಪಿಂಜಾರ ಸಂಘದ ಜಿಲ್ಲಾ ಘಟಕದ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಸಂಘದ ಅಧ್ಯಕ್ಷ ರಾಜಾಭಕ್ಷ ಗುಡುಗೇರಿ ಮಾತನಾಡಿ, ‘ನದಾಫ, ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕ ಹಾಗೂ ಸಾಮಾಜಿಕವಾಗಿ ಅತ್ಯಂತ ಹಿಂದುಳಿದವರಾಗಿದ್ದು, ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರವು ನಿಗಮ, ಮಂಡಳಿ ರಚಿಸುವ ಅವಶ್ಯತೆ ಇದೆ ಎಂದು ಹೇಳಿದರು.

ಹಲವಾರು ವರ್ಷಗಳಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ನದಾಫ ಮತ್ತು ಪಿಂಜಾರ ಸಮಾಜವು ಅತಿ ಹಿಂದುಳಿದಿದ್ದು, ಈ ಸಮಾಜದಲ್ಲಿ ಶೇ 95ರಷ್ಟು ಜನ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಸರ್ಕಾರದ ಯೋಜನೆಗಳು ಸಮಾಜಕ್ಕೆ ಸರಿಯಾಗಿ ತಲುಪುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಾಭಕ್ಷ ಗುಡಗೇರಿ, ಜಿಲ್ಲಾ ಘಟಕದ ಉಪಾಧ್ಯಕ್ಷ ದಾವಲಸಾಬ ಎರಿಮನಿ, ತಾಲ್ಲೂಕು ಘಟಕದ ಅಧ್ಯಕ್ಷ ಹುಸೇನಸಾಬ್‌ ದೇವಿಹೊಸೂರು, ಪ್ರಮುಖರಾದ ನಜೀರಸಾಬ್‌ ನದಾಫ, ಎಂ.ಜೆ.ಹಿತ್ತಲಮನಿ, ಕೆ.ಎಚ್.ದೊಡ್ಡಮನಿ, ಜಹಂಗೀರಸಾಬ್‌ ನದಾಫ, ಬಾಷಾ ಹೊನ್ನುರಸಾಬ್‌, ನಂದ್ಯಾಲ ಬಾಬಾಜಾನ, ಶರೀಫಸಾಬ್‌ ನದಾಫ, ಜಹಾಂಗಿರಿ ಕುಡುಪಲಿ, ಕಬೀರಸಾಬ ಜಂಗ್ಲೇಪ್ಪನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.