ADVERTISEMENT

ರಾಣೆಬೆನ್ನೂರು: ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಮುಷ್ಕರ

ವಿವಿಧ ಸಂಘಟನೆಗಳ ಬೆಂಬಲ: ಸರ್ಕಾರಕ್ಕೆ ಮನವಿ 

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 14:40 IST
Last Updated 22 ಡಿಸೆಂಬರ್ 2023, 14:40 IST
ರಾಣೆಬೆನ್ನೂರಿನ ಹುಣಸೀಕಟ್ಟಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟಿಸಿದರು
ರಾಣೆಬೆನ್ನೂರಿನ ಹುಣಸೀಕಟ್ಟಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟಿಸಿದರು    

ರಾಣೆಬೆನ್ನೂರು: ನಗರದ ಹುಣಸೀಕಟ್ಟಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಗುರುವಾರ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾ ಮೆರವಣಿಗೆಯು ಹೆಸ್ಕಾಂ ಗಣೇಶ ದೇವಸ್ಥಾನದಿಂದ ಪ್ರಾರಂಭವಾಗಿ ನಗರದ ಹಳೇ ರಾಷ್ಟ್ರೀಯ ಹೆದ್ದಾರಿಯಿಂದ ಮಿನಿ ವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್‌ ಹನುಮಂತ ಶಿರಹಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಶಾಂತ ಬೆನ್ನೂರ ಮಾತನಾಡಿ, ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕರು, ನ.23ರಿಂದ ಇಲ್ಲಿಯವರೆಗೂ ನಿರಂತರವಾಗಿ ಮುಷ್ಕರ ಮಾಡುತ್ತಿದ್ದೇವೆ. 15–20 ವರ್ಷಗಳಿಂದ ಸತತವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸರ್ಕಾರ ನಮ್ಮನ್ನು ಸೇವಾ ಕಾಯಂ ಮತ್ತು ಸೇವಾ ಭದ್ರತೆ ನೀಡಬೇಕೆಂದು ಧರಣಿ ಹಾಗೂ ಚಳವಳಿ ಮತ್ತು ಪ್ರತಿಭಟನೆ ಮಾಡುತ್ತಾ ಬಂದಿದ್ದೇವೆ. ಆದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಪರಿಗಣಿಸದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ದೂರಿದರು.

ADVERTISEMENT

ನಮ್ಮ ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ನಿರಂತರವಾಗಿ ರಾಜ್ಯ, ಜಿಲ್ಲೆಯಾದ್ಯಂತ ಎಲ್ಲಾ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ನಮ್ಮ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ. ಆದಷ್ಟು ಬೇಗ ನಮಗೆ ಸೇವಾ ಕಾಯಂ ದೊರೆತು ನಮ್ಮ ಕುಟುಂಬದ ನಿರ್ವಹಣೆಗೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿದರು. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದ ಜಿ. ಕುಂದಾಪುರ, ಕನ್ನಡ ಜಾಗೃತಿ ವೇದಿಕೆಯ ಮಂಜುನಾಥ ಎನ್. ದುಗ್ಗತ್ತಿ, ಪ್ರಧಾನ ಕಾರ್ಯದರ್ಶಿ ಕಾರ್ಮಿಕ ಘಟಕ, ಕರ್ನಾಟಕ ರಕ್ಷಣಾ ವೇದಿಕೆಯ ಫಕ್ಕೀರೇಶ ರಂಗರಡ್ಡಿ, ವಕೀಲರ ಸಂಘದ ಅಧ್ಯಕ್ಷ ಎನ್‌.ಎಚ್‌. ಬುರಡಿಕಟ್ಟಿಯವರು, ನಗರದ ಕಾಲೇಜಿನ ಅಧ್ಯಕ್ಷ ಡಾ. ಗೋವಿಂದಪ್ಪ ಜಿ, ಅತಿಥಿ ಉಪನ್ಯಾಸಕರಾದ ಕೆ.ಎಂ.ಮರಡಿಬಣಕಾರ, ಡಾ.ಎಸ್.ಎಲ್. ಕರ್ಲವಾಡ, ಎಂ.ಐ. ಸೊನ್ನದ, ಶಿಲ್ಪಾ ಹಲಗಣ್ಣನವರ, ಶಿಲ್ಪಾ ಹಾವನೂರ, ಶ್ರೀನಿವಾಸ ನಲವಾಗಲ, ಸತೀಶ ಜ್ಯೋತಿ, ಆನಂದ ಕಡ್ಲೆಪ್ಪನವರ, ಶಿರೂರ, ಕೇಶವ ಹಳ್ಳಿಗುಡಿ, ಮಾಧುರಿ, ವಿಮಾಲಾಕರ, ಕವಿತಾ ಮಾದೇನಹಳ್ಳಿ, ಶ್ವೇತಾ ಜೆ., ಉಮೇಶ ಸಾದರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.