ರಾಣೆಬೆನ್ನೂರು: ನಗರದ ಮೆಡ್ಲೇರಿ ರಸ್ತೆಯ ಆದಿಶಕ್ತಿ ದೇವಸ್ಥಾನದಲ್ಲಿ ಗುರುವಾರ ಹಾವೇರಿ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿ.ಪಿ.ಎಲ್.ಎಫ್. ಮಹಿಳೆಯರಿಗೆ ಆಯೋಜಿಸಲಾಗಿದ್ದ 3 ದಿನಗಳ ಘನತ್ಯಾಜ್ಯ ನಿರ್ವಹಣೆ ಪುನಶ್ಚೇತನ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ನಗರಸಭೆ ಸದಸ್ಯೆ ತ್ರಿವೇಣಿ ಪವಾರ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ಜಿಲ್ಲಾ ಪಂಚಾಯಿತಿ ಹಾವೇರಿ, ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಸೇವಾ ಸಂಸ್ಥೆ(ನೀಡ್ಸ್ ) ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿತ್ತು.
ನೀಡ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಎಚ್.ಎಫ್.ಅಕ್ಕಿ, ಅಮೃತಂ ಆಸ್ಪತ್ರೆಯ ಡಾ.ನಾರಾಯಣ ಪವಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.