ಹಾವೇರಿ: ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 18 ಜನರಲ್ಲಿ ಶಂಕಿತ ಡೆಂಗಿ ಜ್ವರ ಪ್ರಕರಣ ಪತ್ತೆಯಾಗಿದ್ದು, ಜನವರಿಯಿಂದ ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 688ಕ್ಕೆ ಏರಿದೆ. ಅವರಲ್ಲಿ 684 ಮಂದಿ ಗುಣಮುಖರಾಗಿದ್ದಾರೆ. ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಒಬ್ಬ ಬಾಲಕ ಮೃತಪಟ್ಟಿದ್ದಾನೆ.
‘ಜಿಲ್ಲೆಯಲ್ಲಿ ಶೀತಗಾಳಿ, ತುಂತುರು ಮಳೆ ಮುಂದುವರೆದಿದೆ. ಬದಲಾದ ವಾತಾವರಣದಿಂದ ಅನಾರೋಗ್ಯ ಸಮಸ್ಯೆ ಹೆಚ್ಚಿದೆ. 688 ಪ್ರಕರಣಗಳ ಪೈಕಿ 577 ಪ್ರಕರಣಗಳು ಗ್ರಾಮೀಣ ಪ್ರದೇಶದಲ್ಲಿ ಮತ್ತು 111 ಪ್ರಕರಣಗಳು ನಗರ ಪ್ರದೇಶದಲ್ಲಿ ಪತ್ತೆಯಾದವು’ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.
ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ಅತಿ ಹೆಚ್ಚು ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಸೋಮವಾರ ಒಂದೇ ದಿನ 7 ಡೆಂಗಿ ಜ್ವರ ಶಂಕಿತ ಪ್ರಕರಣಗಳು ಪತ್ತೆಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.