ಹಾವೇರಿ: 'ರಾಜ್ಯ ಸರ್ಕಾರ ವಕ್ಫ್ ಮಂಡಳಿ ಮೂಲಕ ಆಸ್ತಿ ಕಬಳಿಸುತ್ತಿದೆ' ಎಂದು ಆರೋಪಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಯ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಗುರುವಾರ ಸೇರಿದ್ದ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
'ನಮ್ಮ ಭೂಮಿ ನಮ್ಮ ಹಕ್ಕು' ಘೋಷಣಾ ಫಲಕ ಪ್ರದರ್ಶಿಸಿದ ಕಾರ್ಯಕರ್ತರು, 'ವಕ್ಫ್ ಆಸ್ತಿ ಸಂಬಂಧ ನೀಡಿರುವ ನೋಟಿಸ್‌ಗಳನ್ನು ಹಿಂಪಡೆಯಬೇಕು. ರೈತರು ಹಾಗೂ ಇತರರ ಆಸ್ತಿಯ ಪಹಣಿಯಲ್ಲಿ ದಾಖಲಿಸಿರುವ ವಕ್ಪ್ ಆಸ್ತಿ ಹೆಸರು ತೆಗೆದು ಹಾಕಬೇಕು' ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ರಸ್ತೆಯಲ್ಲಿ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸರು, ಪ್ರತಿಭಟನೆ ಕೈ ಬಿಡುವಂತೆ ಕೋರಿದರು. ಇದಕ್ಕೆ ಪ್ರತಿಭಟನಾಕಾರರು ಸ್ಪಂದಿಸಲಿಲ್ಲ. ಆಗ, 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ವಾಹನದಲ್ಲಿ ಕರೆದೊಯ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.