ADVERTISEMENT

ಮಾಜಿ ಶಾಸಕ ಮನೋಹರ ತಹಶೀಲ್ದಾರ್ ನಿಧನ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 4:26 IST
Last Updated 21 ನವೆಂಬರ್ 2024, 4:26 IST
<div class="paragraphs"><p>ಮನೋಹರ ತಹಶೀಲ್ದಾರ್</p></div>

ಮನೋಹರ ತಹಶೀಲ್ದಾರ್

   

ಹಾವೇರಿ: ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಮಾಜಿ ಉಪ ಸಭಾಪತಿಯೂ ಆಗಿದ್ದ ಬಿಜೆಪಿ‌ ಮುಖಂಡ ಮನೋಹರ್ ತಹಶೀಲ್ದಾರ್ (78) ಅವರು ಅನಾರೋಗ್ಯದಿಂದಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

1978ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಮನೋಹರ್‌ ತಹಶೀಲ್ದಾರ್‌ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.

ADVERTISEMENT

ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್‌,  ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ವಿಧಾನಸಭೆ ಉಪ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. 

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಮನೋಹರ ಅವರು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಮನೋಹರ ತಹಶೀಲ್ದಾರ ಅವರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಸಾರ್ವಜನಿಕರ ದರ್ಶನ

ಮನೋಹರ ತಹಶೀಲ್ದಾರ ಅವರ ಪಾರ್ಥಿವ ಶರೀರವನ್ನು ಗುರುವಾರ (ನ. 21) ಮಧ್ಯಾಹ್ನ 12 ಗಂಟೆಯಿಂದ ಹಾನಗಲ್ ಪಟ್ಟಣದ ಎನ್‌ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ‌ ಎಂದು‌ ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.