ADVERTISEMENT

ಹಾವೇರಿ | ಅಕ್ರಮ ದಾಸ್ತಾನು: 600 ಕೆ.ಜಿ ಪಡಿತರ ಅಕ್ಕಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:05 IST
Last Updated 7 ಜುಲೈ 2024, 16:05 IST
<div class="paragraphs"><p>ಸಂಗ್ರಹ ಚಿತ್ರ&nbsp;</p></div>

ಸಂಗ್ರಹ ಚಿತ್ರ 

   

ಸವಣೂರು (ಹಾವೇರಿ): ತಾಲ್ಲೂಕಿನ ಹತ್ತಿಮತ್ತೂರು ಗ್ರಾಮದ ಅಂಗಡಿಯೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಕೆ.ಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

‘ಹತ್ತಿಮತ್ತೂರಿನ ಆರೋಪಿ ವಿಜಯಕುಮಾರ ಸಿದ್ದಲಿಂಗಪ್ಪ ಪಟ್ಟಣಶೆಟ್ಟಿ ಎಂಬಾತ ತನ್ನ ಅಂಗಡಿಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿದ್ದ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಆರೋಪಿ ವಿಜಯಕುಮಾರ ಕೃತ್ಯದ ಬಗ್ಗೆ ಮಾಹಿತಿ ಬಂದಿತ್ತು. ವಿಶೇಷ ತಂಡದ ಮೂಲಕ ಅಂಗಡಿ ಮೇಲೆ ದಾಳಿ ಮಾಡಲಾಯಿತು. ಇದೇ ಸಂದರ್ಭದಲ್ಲಿ ತಲಾ 50 ಕೆ.ಜಿ. ತೂಕದ 12 ಪ್ಲಾಸ್ಟಿಕ್ ಚೀಲಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹13,000’ ಎಂದು ತಿಳಿಸಿದರು.

‘ಜನರಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಆರೋಪಿ ತನ್ನ ಲಾಭಕ್ಕಾಗಿ ಸಂಗ್ರಹಿಸಿಟ್ಟುಕೊಂಡಿದ್ದ. ಅದನ್ನು ಹೆಚ್ಚಿನ ದರಕ್ಕೆ ಮಾರಿ, ಹಣ ಗಳಿಸುವುದು ಆತನ ಉದ್ದೇಶವಾಗಿತ್ತು. ವಿಜಯಕುಮಾರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.