ADVERTISEMENT

ಹಾವೇರಿಯಲ್ಲಿ‌ ಜೋರು‌ ಮಳೆ: ಕಾಲುವೆ ನೀರಿನಲ್ಲಿ ಕೊಚ್ಚಿಕೊಂಡು ಹೋದ ಬಾಲಕ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 5:16 IST
Last Updated 17 ಅಕ್ಟೋಬರ್ 2024, 5:16 IST
   

ಹಾವೇರಿ: ನಗರದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಜೋರು ಮಳೆ ಆಗಿದ್ದು, ದೊಡ್ಡ ಕಾಲುವೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ 10 ವರ್ಷದ ಬಾಲಕ‌ ಕೊಚ್ಚಿಕೊಂಡು ಹೋಗಿದ್ದಾನೆ.

ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿನಗರದ 3ನೇ ಕ್ರಾಸ್‌ನಲ್ಲಿರುವ ಕಾಲುವೆಯಲ್ಲಿ ಬಾಲಕ ನಿವೇದನ ಕೊಚ್ಚಿಕೊಂಡು ಹೋಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಹಾಗೂ‌ ನಗರಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸ್ಥಳೀಯ ನಿವಾಸಿ ನಿವೇದನ ಮನೆ ಎದುರು ಓಡಾಡುತ್ತಿದ್ದ. ಇದೇ ಸಂದರ್ಭದಲ್ಲಿ ಜೋರು ಮಳೆ ಇತ್ತು. ಕಾಲುವೆಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಕಾಲುವೆಗೆ ಆಯತಪ್ಪಿ ಬಿದ್ದು ನಿವೇದನ ನೀರಿನಲ್ಲಿ‌ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಸ್ಥಳೀಯರು ತಿಳಿಸಿದರು.

ADVERTISEMENT

ಜಿಲ್ಲಾಧಿಕಾರಿ ವಿಜಯ‌ ಮಹಾಂತೇಶ ದಾನಮ್ಮನವರ ಹಾಗೂ ಹೆಚ್ಚುವರಿ‌ ಎಸ್ಪಿ ಶಿರಕೋಳ‌ ಅವರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

ಘಟನಾ‌ ಸ್ಥಳದಲ್ಲಿ ನಿವೇದನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಮ್ಮ‌ ಮಗನನ್ನು ಹುಡುಕಿಕೊಡುವಂತೆ ಪೋಷಕರು ಗೋಗರೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.