ADVERTISEMENT

ಹಾನಗಲ್: ಬರ ಪರಿಹಾರಕ್ಕಾಗಿ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 20 ಮೇ 2024, 15:31 IST
Last Updated 20 ಮೇ 2024, 15:31 IST
ಶ್ರೀನಿವಾಸ ಮಾನೆ
ಶ್ರೀನಿವಾಸ ಮಾನೆ   

ಹಾನಗಲ್: 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ನಿಯಮಾವಳಿ ಅನ್ವಯ ಈಗಾಗಲೇ ಸರ್ಕಾರ ಅರ್ಹ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಪರಿಹಾರ ಹಣ ಜಮೆ ಆಗದೇ ಇದ್ದ ರೈತರು ತಕ್ಷಣವೇ ನಾಡಕಚೇರಿ ಇಲ್ಲವೇ ತಹಶೀಲ್ದಾರ್ ಕಚೇರಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.

ಪರಿಹಾರ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಜಮೆ ಆಗದಿರುವ ರೈತರು ಅರ್ಜಿ ಸಲ್ಲಿಸಿದರೆ, ತಕ್ಷಣವೇ ಸರಿಪಡಿಸಿ ಪರಿಹಾರ ಹಣ ಜಮೆ ಮಾಡಲು ಅಧಿಕಾರಿಗಳು
ಕ್ರಮ ಕೈಗೊಳ್ಳಲಿದ್ದಾರೆ.

ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ ಈ ಕುರಿತು ಸಹಾಯವಾಣಿ ತೆರೆಯಲಾಗಿದ್ದು, ದೂರವಾಣಿ ಸಂಖ್ಯೆ 08379-262241 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಶ್ರೀನಿವಾಸ ಮಾನೆ ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.