ADVERTISEMENT

ತೋಟಗಾರಿಕೆ ಬೆಳೆ ವಿಮೆ: 31 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 16:09 IST
Last Updated 30 ಜೂನ್ 2024, 16:09 IST

ಬ್ಯಾಡಗಿ: ತಾಲ್ಲೂಕಿನ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಅಡಿಕೆ, ಶುಂಠಿ, ಹಸಿ ಮೆಣಸಿನಕಾಯಿ ಹಾಗೂ ಮಾವು ಬೆಳೆಗಳಿಗೆ ಸರ್ಕಾರ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. 2024–25ನೇ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಕಂತು ತುಂಬಲು ಜುಲೈ 31 ಕೊನೆಯ ದಿನವಾಗಿದೆ.

ಪ್ರತಿ ಹೆಕ್ಟೇರ್‌ ಅಡಿಕೆ ಬೆಳೆಗೆ ₹6,400, ಹಸಿಮೆಣಸಿನಕಾಯಿ ₹3,550, ಶುಂಠಿ ₹6,500, ಮಾವು ₹4,000 ದಂತೆ ವಿಮಾ ಕಂತನ್ನು ನಿಗದಿಪಡಿಸಿದೆ. ಇಚ್ಛೆಯುಳ್ಳ ಬೆಳೆ ಸಾಲ ಪಡೆಯದ ರೈತರು ಪಹಣಿ, ಬ್ಯಾಂಕ್‌ ಪಾಸ್‌ ಪುಸ್ತಕ, ಕಂದಾಯ ರಸೀದಿ ಹಾಗೂ ಆಧಾರ ಸಂಖ್ಯೆಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಬೆಳೆ ವಿಮೆ ತುಂಬಿದ ರೈತರು ಬೆಳೆ ಸಮೀಕ್ಷೆಯನ್ನು ಖುದ್ದಾಗಿ ಅಥವಾ ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಕಡ್ಡಾಯವಾಗಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗೆ ಎಚ್‌ಡಿಎಫ್‌ಸಿ ಅಗ್ರೋ ಇನ್ಸೂರನ್ಸ್‌ ಪ್ರತಿನಿಧಿ ಮೊ.81500 79660 ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.