ADVERTISEMENT

ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ತುಸು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 26 ಜೂನ್ 2023, 13:18 IST
Last Updated 26 ಜೂನ್ 2023, 13:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 2,092 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳವಾಗಿದೆ.

ಕಳೆದ ಸೋಮವಾರ ಮಾರುಕಟ್ಟೆಗೆ 1,996 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಕಳೆದ ಗುರುವಾರ ವಿದ್ಯುತ್‌ ದರ ಹೆಚ್ಚಳವನ್ನು ಖಂಡಿಸಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ನೀಡಿದ ಬಂದ್‌ ಕರೆಗೆ ಇಡೀ ಮಾರುಕಟ್ಟೆ ಸ್ಥಬ್ದಗೊಂಡಿತ್ತು. ವರ್ತಕಕರು ಟೆಂಡರ್‌ನಲ್ಲಿ ಭಾಗವಹಿಸದೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಆವಕದಲ್ಲಿ ತುಸು ಹೆಚ್ಚಳವಾಗಿದೆ ಎನ್ನಲಾಗಿದೆ.

ಈಗಾಗಲೇ ಮೆಣಸಿನಕಾಯಿ ಹಂಗಾಮು ಕೊನೆಗೊಂಡಿದ್ದು, ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಸಂಗ್ರಹವಿರುವ ಮೆಣಸಿನಕಾಯಿಯ ಮಾರಾಟ ಮಾತ್ರ ನಡೆಯುತ್ತಿದೆ. ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದು ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ ಎನ್ನಲಾಗಿದೆ. ತೇವಾಂಶ ಹೆಚ್ಚಿರುವ ಹಾಗೂ ಕನಿಷ್ಠ ಗುಣಮಟ್ಟ ಹೊಂದಿರದ 304 ಲಾಟ್‌ಗಳಿಗೆ ಸೋಮವಾರ ಟೆಂಡರ್ ನಮೂದಿಸಿಲ್ಲ. 2 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹61,000 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ಕಳೆದ ಸೋಮವಾರಕ್ಕಿಂತ ಗರಿಷ್ಠ ಬೆಲೆಯಲ್ಲಿ ಕ್ವಿಂಟಲ್‌ಗೆ ₹9 ಸಾವಿರ ಇಳಿಕೆಯಾಗಿದೆ. 42 ಚೀಲ ಕಡ್ಡಿ ಮೆಣಸಿನಕಾಯಿ ₹53,321 ರಂತೆ, ಗುಂಟೂರ ತಳಿ ಮೆಣಸಿನಕಾಯಿ ಗರಿಷ್ಠ ₹18,589 ರಂತೆ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಕಡ್ಡಿ ಮೆಣಸಿನಕಾಯಿ ₹30,269, ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹41,509 ಹಾಗೂ ಗುಂಟೂರು ತಳಿ ₹16,209 ರಂತೆ ಮಾರಾಟವಾಗಿದ್ದು ಸ್ಥಿರತೆ ಕಾಯ್ದುಕೊಂಡಿದೆ. ಇಂದಿನ ಟೆಂಡರ್‌ ಪ್ರಕ್ರಿಯೆಯಲ್ಲಿ ಒಟ್ಟು 169 ಖರೀದಿ ವರ್ತಕರು ಪಾಲ್ಗೊಂಡಿದ್ದು, ಒಟ್ಟಾರೆ 10 ಸಾವಿರ ಬಾರಿ ದರವನ್ನು ಕೋಟ್‌ ಮಾಡಿದ್ದಾರೆ ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ADVERTISEMENT

ಸೋಮವಾರದ ದರ ಪ್ರತಿ ಕ್ವಿಂಟಲ್‌ಗೆ(₹ಗಳಲ್ಲಿ)
ತಳಿ;ಕನಿಷ್;ಗರಿಷ್ಠ
ಬ್ಯಾಡಗಿ ಕಡ್ಡಿ;₹2,509;₹53,321
ಬ್ಯಾಡಗಿ ಡಬ್ಬಿ;₹3,699;₹61,000
ಗುಂಟೂರು ತಳಿ;₹1,609;₹18,589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.