ಹಾವೇರಿ: ಶಿಗ್ಗಾವಿ ತುಂತುರು ನೀರಾವರಿ ಯೋಜನೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ₹1,500 ಕೋಟಿ ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ನೆಹರು ಓಲೇಕಾರ್ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ನೆಹರು ಓಲೇಕಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರಿಗೆ ಒಂದು ಪೈಪ್ ಕೂಡ ನೀಡಿಲ್ಲ. ತುಂತುರು ನೀರಾವರಿ ಯೋಜನೆ ಶಿಗ್ಗಾವಿ ಕ್ಷೇತ್ರದ ಜನರಿಗೆ ಮಾತ್ರ ಸೀಮಿತ ಮಾಡಿದ್ದಾರೆ. ಇತರ ಜಿಲ್ಲೆಯ ರೈತರಿಗೆ ಯೋಜನೆಯಿಂದ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಓಲೇಕಾರ್ ಅಸಮಾಧಾನ ಹೊರ ಹಾಕಿದ್ದಾರೆ.
ನನ್ನ ಬೆಳವಣಿಗೆಯನ್ನು ಸಹಿಸದೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಬೊಮ್ಮಾಯಿ ಅವರಿಗೆ ಧಮ್, ತಾಕತ್ ಎಷ್ಟಿದೆ ಎಂಬುದನ್ನು ತೋರಿಸಲಿ. ನಾವು ಕೂಡ ನಮ್ಮ ತಾಕತ್ತು ತೋರಿಸುತ್ತೇವೆ ಎಂದು ಓಲೇಕಾರ್ ಸವಾಲು ಹಾಕಿದರು.
ನೆಹರು ಓಲೇಕಾರ ಅವರಿಗೆ ಟಿಕೆಟ್ ಕೈ ತಪ್ಪಿಸಿರುವುದನ್ನು ಖಂಡಿಸಿ, ಅವರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.