ADVERTISEMENT

ಹಾವೇರಿ ಬಳಿ ಬೈಕ್‌ಗೆ ಗುದ್ದಿದ ಲಾರಿ: ಗಂಡ, ಹೆಂಡತಿ, ಆರು ವರ್ಷದ ಮಗ ಸಾವು

ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಬೈಪಾಸ್‌ ಬಳಿ ಘಟನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 15:17 IST
Last Updated 27 ಫೆಬ್ರುವರಿ 2024, 15:17 IST
   

ಹಾವೇರಿ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಮಂಗಳವಾರ ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಬೈಪಾಸ್‌ ಬಳಿ ನಡೆದಿದೆ. 

ಹಾವೇರಿಯ ನಾಗೇಂದ್ರನಮಟ್ಟಿ ನಿವಾಸಿಗಳಾದ ಆಸೀಫ್‌ವುಲ್ಲಾ ಮಲ್ಲಾಡದ (34) ಮತ್ತು ಅಫ್ರಿನ್‌ಬಾನು ಮಲ್ಲಾಡದ (27) ದಂಪತಿ ಹಾಗೂ ಇವರ 6 ವರ್ಷದ ಪುತ್ರ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಹೆಣ್ಣುಮಗುವನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. 

ಬ್ಯಾಡಗಿ ತಾಲ್ಲೂಕಿನ ಶಿಡೇನೂರಿನಿಂದ ಹಾವೇರಿ ನಗರಕ್ಕೆ ಬೈಕ್‌ನಲ್ಲಿ ಆಸೀಫ್‌ವುಲ್ಲಾ ಕುಟುಂಬದ ನಾಲ್ವರು ಮರಳಿ ಬರುವಾಗ ಈ ದುರ್ಘಟನೆ ಸಂಭವಿಸಿದೆ. 

ADVERTISEMENT

ಚೆಲ್ಲಾಪಿಲ್ಲಿಯಾಗಿದ್ದ ಮೃತದೇಹಗಳನ್ನು ಆಂಬುಲೆನ್ಸ್‌ ಮೂಲಕ ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು. ಸ್ಥಳಕ್ಕೆ ಡಿವೈಎಸ್ಪಿ ಗಣೇಶ ಮತ್ತು ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.