ರಾಣೆಬೆನ್ನೂರು: ತಾಲ್ಲೂಕಿನ ಕಾಕೋಳ ಗ್ರಾಮದ ಮೈಲಾರಪ್ಪ ಕರಬಣ್ಣನವರ (32) ತಾನು ಉಳಿದಿದ್ದ ನಗರದ ವಸತಿಗೃಹದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಮಹಿಳೆಯೊಂದಿಗೆ ವಸತಿಗೃಹದಲ್ಲಿ ತಂಗಿದ್ದ ಮೈಲಾರಪ್ಪ ಮಹಿಳೆಯ ಸೀರೆಯಿಂದ ಬಾತ್ರೂಂನಲ್ಲಿ ನೇಣುಹಾಕಿಕೊಂಡಿದ್ದಾರೆ ಎನ್ನಲಾಗಿದೆ. ನಗರಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ವ್ಯಕ್ತಿಯ ಜೊತೆಗಿದ್ದ ಮಹಿಳೆಯನ್ನು ವಿಚಾರಣೆಗೊಳಪಡಿಸಿದ್ದಾರೆ.
ಈ ಪ್ರಕರಣದ ಕುರಿತು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಸಂಬಂಧಿಕರು ಕೊಲೆ ಶಂಕೆ ವ್ಯಕ್ತಪಡಿಸಿ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.