ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಸ್ಪಾಕ್ ಚಮನಸಾಬ್ ಕೋಟಿ ಎಂಬಾತನಿಗೆ ವಿಶೇಷ ಸೆಷನ್ಸ್ ನ್ಯಾಯಾಲಯದ (ಎಫ್.ಟಿ.ಎಸ್.ಸಿ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.60 ಲಕ್ಷ ದಂಡ ವಿಧಿಸಿದ್ದಾರೆ.
ಅಸ್ಪಾಕ ಚಮನಸಾಬ ಕೋಟಿ 17 ಅಕ್ಟೋಬರ್ 2017ರಂದು ಬಾಲಕಿಯು ತನ್ನ ಜಮೀನಿನಲ್ಲಿ ಒಬ್ಬಳೇ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಪುಸಲಾಯಿಸಿ ಬಾಲಕಿಯ ಇಚ್ಚೆಯ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಹಾನಗಲ್ ವೃತ್ತದ ತನಿಖಾಧಿಕಾರಿ ಸಿಪಿಐ ಎಸ್.ಆರ್.ಗಣಾಚಾರಿ ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.