ADVERTISEMENT

ಹಾವೇರಿ: ದಾಖಲೆ ಇಲ್ಲದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 15:49 IST
Last Updated 18 ಏಪ್ರಿಲ್ 2023, 15:49 IST
   

ಹಾವೇರಿ: ನಗರದ ಹೊರವಲಯದಲ್ಲಿರುವ ಅಜ್ಜಯ್ಯನ ಗುಡಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹಾವೇರಿ ಎಸ್.ಎಸ್.ಟಿ ತಂಡದ ಅಧಿಕಾರಿಗಳು ₹6 ಕೋಟಿ 90 ಲಕ್ಷ ಮೌಲ್ಯದ ಚಿನ್ನಾಭರಣಗಳು ಎಂದು ಅಂದಾಜಿಸಿದ್ದಾರೆ.

ಹುಬ್ಬಳ್ಳಿಯಿಂದ ಹಾವೇರಿ ಮತ್ತು ದಾವಣಗೆರೆಯ ಚಿನ್ನದ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಸಾಗಿಸಲಾಗುತ್ತಿತ್ತು.

ADVERTISEMENT

11 ಕೆ.ಜಿ.ಯಷ್ಟು ಚಿನ್ನ, 70 ಕೆ.ಜಿ.ಯಷ್ಟು ಬೆಳ್ಳಿಯ ಆಭರಣಗಳನ್ನ ಜಪ್ತಿ ಮಾಡಲಾಗಿದೆ.

'ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನ ಪಡೆದಿರಲಿಲ್ಲ.
ನಿಖರವಾಗಿ ಚಿನ್ನಾಭರಣಗಳನ್ನು ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನುವ ದಾಖಲೆಗಳು ಇರಲಿಲ್ಲ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದ ಸಮಿತಿಗೆ ಚಿನ್ನಾಭರಣ ವರ್ಗಾವಣೆ ಮಾಡಲಾಗಿದೆ.

ಹಾವೇರಿ ಗ್ರಾಮೀಣ ಠಾಣೆಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.