ಹಾವೇರಿ: ಉಕ್ರೇನ್‌ನಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
‘ಸೋಮವಾರ ಬೆಳಿಗ್ಗೆ 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ.ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುವುದು. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ತಿಳಿಸಿದರು.
‘ನನ್ನ ಮಗ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಹೊಂದಿದ್ದ. ಆ ಆಸೆ ಈಡೇರಲಿಲ್ಲ. ಬೇರೆ ವೈದ್ಯಕೀಯ ವಿದ್ಯಾರ್ಥಿಗಳ ಮುಖಾಂತರವಾದರೂ ಅವನ ಮೃತದೇಹ ವೈದ್ಯಕೀಯ ಕ್ಷೇತ್ರಕ್ಕೆ ಬಳಕೆಯಾಗಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇವೆ’ ಎಂದು ನುಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.