ADVERTISEMENT

ಹಿರೇಕೆರೂರು: ತಹಶೀಲ್ದಾರ್ ಕಚೇರಿಗೆ ನೀರು, ಪಾರ್ಕಿಂಗ್ ವ್ಯವಸ್ಥೆ

ಪ್ರಜಾವಾಣಿ ವರದಿ ಪರಿಣಾಮ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2024, 4:09 IST
Last Updated 27 ಸೆಪ್ಟೆಂಬರ್ 2024, 4:09 IST
ಹಿರೇಕೆರೂರು ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ವಾಹನಗಳ ನಿಲುಗಡೆ ತಪ್ಪಿಸಲು ಪೊಲೀಸ್ ಸಿಬ್ಬಂದಿಯನ್ನು ನೇಮಿಸಿರುವುದು
ಹಿರೇಕೆರೂರು ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ವಾಹನಗಳ ನಿಲುಗಡೆ ತಪ್ಪಿಸಲು ಪೊಲೀಸ್ ಸಿಬ್ಬಂದಿಯನ್ನು ನೇಮಿಸಿರುವುದು   

ಹಿರೇಕೆರೂರು: ಪಟ್ಟಣದ ತಹಶೀಲ್ದಾರ್ ಕಚೇರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳವನ್ನು ಗುರುತಿಸಿ ನಾಮಫಲಕ ಅಳವಡಿಕೆ ಮಾಡಿ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.

‘ಸೌಕರ್ಯ ವಂಚಿತ ತಾಲ್ಲೂಕು ಕಚೇರಿ’ ಎಂಬ ಶೀರ್ಷಿಕೆ ಅಡಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟಿಸಿತು.

ತಹಶೀಲ್ದಾರ್ ಎಚ್. ಪ್ರಭಾಕರ್‌ಗೌಡ ಅವರು ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ಸೂಕ್ತವಾದ ಸ್ಥಳ ಹಾಗೂ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್‌ ಅನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರವೊಂದನ್ನು ಬರೆದಿದ್ದಾರೆ.

ADVERTISEMENT

ವಾಹನಗಳ ನಿಲುಗಡೆ ಸ್ಥಳವನ್ನು ಗುರುತಿಸಿ ಅಲ್ಲಿ ನಿಲ್ಲಿಸುವಂತೆ ಭಿತ್ತಿ ಪತ್ರಗಳನ್ನು ಸಹ ಅಂಟಿಸಲಾಗಿದೆ. ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದವರಿಗೆ ಮುಂದಿನ ದಿನಗಳಲ್ಲಿ ದಂಡ ಹಾಕಲಾಗುತ್ತದೆ ಎಂದು ತಹಶೀಲ್ದಾರ್ ಎಚ್. ಪ್ರಭಾಕರ್‌ ಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.