ರಟ್ಟೀಹಳ್ಳಿ: ಪಟ್ಟಣದ ತರಳುಬಾಳು ಬಡಾವಣೆ ನಾಗರಿಕ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಒಂದು ಮತ್ತು ಎರಡನೇ ಕ್ರಾಸ್‌ನಲ್ಲಿ ಸಾಕಷ್ಟು ಮನೆ ಇದ್ದು, ಇಲ್ಲಿ ಸರಿಯಾದ ರಸ್ತೆಗಳಿಲ್ಲ. ಬೀದಿ ದೀಪಗಳ ವ್ಯವಸ್ಥೆಯಿಲ್ಲ. ಅಲ್ಲದೇ ಖಾಲಿ ನಿವೇಶನಗಳಲ್ಲಿ ವಿಪರೀತ ಗಿಡ-ಗಂಟೆಗಳು ಬೆಳೆದು ವಿಷಜಂತುಗಳ ತಾಣವಾಗಿವೆ.
ಅಲ್ಲದೆ ಈ ಗಿಡಗಂಟಿಗಳಲ್ಲಿ ಹಂದಿಗಳ ವಾಸಸ್ಥಳವಾಗಿದ್ದು, ವಿಪರೀತ ಗಲೀಜು ಮಾಡುತ್ತಿವೆ. ರಾತ್ರಿ ವೇಳೆಯಲ್ಲಿ ಮಹಿಳೆಯರು ಈ ಮಾರ್ಗದಲ್ಲಿ ಸಂಚರಿಸಲು ಭಯಪಡುವಂತಾಗಿದೆ. ತರಳುಬಾಳು ಬಡಾವಣೆಗಳಲ್ಲಿ ಪಕ್ಕಾ ಚರಂಡಿ ವ್ಯವಸ್ಥೆಯಿಲ್ಲದೆ ಎಲ್ಲೆಂದರಲ್ಲಿ ಮೋರಿ ನೀರು ನಿಂತು ದುರ್ವಾಸನೆ ಬೀರುತ್ತಿದೆ.
ವಿಪರೀತ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದೆ. ಕಾರಣ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ತರಳುಬಾಳು ಬಡಾವಣೆಯ ಒಂದು ಮತ್ತು ಎರಡನೇ ಕ್ರಾಸ್‌ನಲ್ಲಿ ಸೂಕ್ತ ಬೀದಿ ದೀಪ, ಚರಂಡಿ ವ್ಯವಸ್ಥೆ, ಗುಣಮಟ್ಟದ ರಸ್ತೆ, ನಳಗಳ ಸಂಪರ್ಕ ಸೇರಿದಂತೆ ಅಗತ್ಯ ನಾಗರಿಕ ಸೌಲಭ್ಯ ಒದಗಿಸಬೇಕು ಎಂದು ಶಿಕ್ಷಕ ಪ್ರಶಾಂತಕುಮಾರ ಕಠಾರೆ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.