ರಾಣೆಬೆನ್ನೂರು: ರಾಣೆಬೆನ್ನೂರು ತಾಲ್ಲೂಕು ಸಾಹಿತ್ಯ ಪರಿಷತ್‌ಗಾಗಿ ಶ್ರಮಿಸಿದ ಎಲ್ಲಾ ಸಾಹಿತಿಗಳ ಸೇವೆ ಅವಿಸ್ಮರಣಿಯವಾಗಿದ್ದು. ರಾಜ್ಯದಲ್ಲಿಯೇ ತಾಲ್ಲೂಕು ಕೇಂದ್ರದಲ್ಲಿ ಸುಂದರ ಭವನ ನಿರ್ಮಿಸಿದ ಕೀರ್ತಿ ಇಲ್ಲಿನ ಸಾಹಿತ್ಯಾಸಕ್ತರಿಗೆ ಸಲ್ಲುತ್ತದೆ ಎಂದು ಮಲ್ಲೇಶಪ್ಪ ಅರಕೇರಿ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾವೇರಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ರಾಣೆಬೆನ್ನೂರು ಸಂಯುಕ್ತಾಶ್ರಯದಲ್ಲಿ, ನಗರದ ಮೇಡ್ಲೆರಿ ರಸ್ತೆಯ ವಾಗೀಶ ನಗರದಲ್ಲಿರುವ ತಾಲ್ಲೂಕು ಕನ್ನಡ ಸಾಹಿತ್ಯ ಭವನದಲ್ಲಿ ಏರ್ಪಡಿಸಿದ್ದ ನೂತನ ಅಧ್ಯಕ್ಷರ ಸೇವಾ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ನಗರದಲ್ಲಿ ನಡೆದ ಹಲವಾರು ಸಾಹಿತ್ಯ ಕಾರ್ಯಕ್ರಮಗಳು ಯಶಸ್ವಿಯಾಗಲು ನಮ್ಮ ತಾಲ್ಲೂಕಿನ ಸಾಹಿತ್ಯಾಸಕ್ತರು, ಕನ್ನಡ ಅಭಿಮಾನಿಗಳು, ವರ್ತಕರು, ಉದ್ಯಮಿಗಳು, ನೌಕರರು, ಪತ್ರಕರ್ತರು ಶ್ರಮಿಸಿರುವುದು ಹಾಗೂ ತಾಲ್ಲೂಕು ಕಸಾಪಗೆ ಅಧ್ಯಕ್ಷರಾದವರೆಲ್ಲರ ಸೇವೆ ಅವಿಸ್ಮರಣಿಯ ಎಂದು ಹೇಳಿದರು.
ನಗರಸಭೆಯ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿದರು.
ನಿಕಟಪೂರ್ವ ಅಧ್ಯಕ್ಷ ವೀರೇಶ ಜಂಬಗಿ ನೂತನ ಅಧ್ಯಕ್ಷ ಪ್ರಭಾಕರ ಶಿಗ್ಲಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ನಿವೃತ್ತ ಮುಖ್ಯಶಿಕ್ಷಕಿ ಮೈಲಾರ ಸಾವಿತ್ರಿಬಾಯಿ ಮಾಲತೇಶ್ ಆಶಯ ನುಡಿಗಳನ್ನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಏಕನಾಥ ಭಾನುವಳ್ಳಿ, ವರ್ತಕ ರಾಜಣ್ಣ ಮೊಟಗಿ, ವರ್ತಕರ ಸಂಘದ ಅಧ್ಯಕ್ಷ ಜಿ.ಜಿ ಹೊಟ್ಟಿಗೌಡ್ರ, ನಗರಸಬೆ ಸದಸ್ಯೆ ಪ್ರಭಾವತಿ ತಿಳುವಳ್ಳಿ, ನಿವೃತ್ತ ಪ್ರಾಚಾರ್ಯ ವೈ.ಯು ತಳವಾರ, ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ ಮಾಜಿ ಸದಸ್ಯ ನಾಮದೇವ ಚಿಕ್ಕಣ್ಣನವರ, ಜಿಲ್ಲಾ ಕ.ಸಾ.ಪ ಮಾಜಿ ಅಧ್ಯಕ್ಷ ಕೆ.ಎಚ್.ಮುಕ್ಕಣ್ಣನವರ, ತಾಲ್ಲೂಕು ಕಸಾಪ ಸದಸ್ಯರು ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.